Breaking News

ಪ್ರವಾಹ ಎದುರಿಸಲು ಮುನ್ನೆಚ್ಚರ ಕ್ರಮ ವಹಿಸಿ : ಬಿ ಎಸ್ ಯಡಿಯೂರಪ್ಪ.


ಬೆಂಗಳೂರು : ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಮಳೆಯಿಂದ ಆಗುತ್ತಿರುವ ಹಾನಿ ಹಾಗೂ ಕೈಗೊಳ್ಳಲಾಗಿರುವ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವೀಡಿಯೊ ಸಂವಾದ ನಡೆಸಿದರು.

ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂಡಿಗೆ ಮಳೆಯಿಂದ ಆಗುತ್ತಿರುವ ಹಾನಿ ಹಾಗೂ ಕೈಗೊಳ್ಳಲಾಗಿರುವ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವೀಡಿಯೊ ಸಂವಾದ ನಡೆಸಿದರು.
ಸಭೆಯ ಮುಖ್ಯಾಂಶಗಳು:

1. ಕೊಡಗು, ಬಳ್ಳಾರಿ, ಹಾಸನ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಮಂಗಳೂರು, ಚಿಕ್ಕಮಗಳೂರು, ವಿಜಯಪುರ, ಕಲಬುರಗಿ, ಮೈಸೂರು, ಕೊಪ್ಪಳ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಕಳೆದ 8 ದಿನಗಳಿಂದ ಮಳೆಯಾಗುತ್ತಿದ್ದು, ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ ಪರಿಹಾರ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಸೂಚಿಸಿದರು.

2. ಪ್ರವಾಹ ತಡೆಗಟ್ಟಲು ಅತ್ಯಾಧುನಿಕ ಉಪಕರಣಗಳನ್ನು ಖರೀದಿಸಲು ಹಣ ಬಿಡುಗಡೆ ಮಾಡಲಾಗುವುದು.

3. ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಗಳಲ್ಲಿ ಈಗಾಗಲೇ ಲಭ್ಯವಿರುವ ಮೊತ್ತವನ್ನು ಪ್ರವಾಹ ಪರಿಸ್ಥಿತಿ ನಿಭಾಯಿಸಲು ಬಳಕೆ ಮಾಡುವುದು

4. ನದಿ ಮತ್ತು ಭೂಕುಸಿತ ಉಂಟಾಗುವ ಸ್ಥಳಗಳನ್ನು ಗುರುತಿಸಲು ವಿಶೇಷ ತಂಡವನ್ನು ರಚಿಸಲು ಕ್ರಮಕೈಗೊಳ್ಳಬೇಕು

5. ಭೂಕುಸಿತ ಉಂಟಾಗಬಹುದಾದ ಪ್ರದೇಶಗಳಲ್ಲಿರುವ ಜನರನ್ನು ಮುಂಚಿತವಾಗಿಯೇ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಬೇಕು.

6. ಬೆಳೆ ನಷ್ಟ ಉಂಟಾಗಿರುವ ಬಗ್ಗೆ ಸಮೀಕ್ಷೆ ನಡೆಸಿ ವರದಿ ನೀಡಿದಲ್ಲಿ ಪರಿಹಾರ ವಿತರಣೆಗೆ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಕೃಷಿ ಸಚಿವ ಬಿ.ಸಿ.ಪಾಟೀಲ್ , ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯ ಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ಇ. ವಿ.ರಮಣರೆಡ್ಡಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ,ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಏಕಾಏಕಿ ವಾಹಣ ತಡೆಯುವಂತಿಲ್ಲ; ಪೋಲಿಸರಿಗೆ ಡಿಜಿಪಿ ಪ್ರವೀಣ್ ಸೂದ್ ಸೂಚನೆ!

ಬೆಂಗಳೂರು: ನಗರದ ವಾಹನ ಸವಾರರಿಗೆ ಗುಡ್ ನ್ಯೂಸ್ ಇಲ್ಲಿದೆ. ಅನಗತ್ಯ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ