Breaking News

*ಪ್ರವಾಹ ಮತ್ತು ಅತೀವೃಷ್ಟಿ ನಿಯಂತ್ರಣ ಸಲುವಾಗಿ ಗೋಕಾಕ ತಹಶೀಲ್ದಾರ್ ಕಚೇರಿಯಲ್ಲಿ ಪೂರ್ವಭಾವಿ ಸಭೆ*


ಗೋಕಾಕ: ನಿರಂತರ ಮಳೆ ಹಾಗೂ ಮುಂದೆ ಬರಬಹುದಾದ ಪ್ರವಾಹ ಭೀತಿಯನ್ನು ಎದುರಿಸುವ ಸಲುವಾಗಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ತಾಲೂಕಾ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪರಿಶಿಷ್ಟ ಪಂಗಡ ಕಲ್ಯಾಣಾಧಿಕಾರಿಗಳಾದ ಬಸವರಾಜ ಕುರಿಹುಲಿ ಅವರು ತಾಲೂಕಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ತಹಶೀಲ್ದಾರ ಕಛೇರಿಯಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ನಿಯಂತ್ರಣದ ಬಗ್ಗೆ ಕರೆಯಲಾದ ಪೂರ್ವಭಾವಿ ಸಭೆಯಲ್ಲಿ ಪಂಚಾಯತ ಮಟ್ಟದ ನೋಡಲ್ ಅಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದಲ್ಲದೆ ಕಾಳಜಿ ಕೇಂದ್ರಗಳಿಗಾಗಿ ಕಟ್ಟಡಗಳನ್ನು ಗುರುತಿಸಿ ಜನರ ಸ್ಥಳಾಂತರಕ್ಕಾಗಿ ಕ್ರಮವಹಿಸುವುದು ಮತ್ತು ರೋಗ ರುಜಿನಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸುವುದು, ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಇತ್ಯಾದಿಗಳನ್ನು ಮಾಡಿಕೊಳ್ಳಲು ಸೂಚನೆ ನೀಡಿದರು.

ತಹಶೀಲ್ದಾರ ಗೋಕಾಕ ರವರು ಮಾತನಾಡಿ ತಾಲೂಕು ಕಛೇರಿಯಲ್ಲಿ 24*7 ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ಸಹಾಯವಾಣಿ ಸಂಖ್ಯೆ 08332-225073 ಇರುತ್ತದೆ ಎಂದೂ, ಪ್ರವಾಹ ಪೀಡಿತವಾಗುವ ಸಂಭಾವ್ಯ ಗ್ರಾಮಗಳಿಗೆ ತಾಲೂಕು ಮಟ್ಟದ ಅಧಿಕಾರಿಗಳನ್ನು ನೂಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ ಮತ್ತು ಯಾವುದೇ ರೀತಿಯ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ತಕ್ಷಣ ಸ್ಪಂದಿಸಲು ತಾಲೂಕು ಆಡಳಿತದಿಂದ ಸಂಪೂರ್ಣ ಸಿಧ್ದತೆಯನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ನಗರಸಭೆ ಆಯುಕ್ತರಾದ ಶ್ರೀ ಶಿವಾನಂದ ಹಿರೇಮಠ, ತಾಲೂಕ ಪಂಚಾಯತ ಕಾರ್ಯ ನಿರ್ವಹಣಾಧಿಕಾರಿ ಮುರಳಿ ದೇಶಪಾಂಡೆ, ತೋಟಗಾರಿಕೆ ಇಲಾಖೆಯ ಜನಮಟ್ಟಿ, ಬಿಇಒ ಜಿ ಬಿ ಬಳಿಗಾರ, ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಎಸ್ ಪಿ ವರಾಳೆ, ಪಶು ವೈದ್ಯಕೀಯ ಇಲಾಖೆಯ ಮೋಹನ ಕಮತ, ಆರಕ್ಷಕ ಉಪನಿರೀಕ್ಷಕರು ಗೋಕಾಕ ಶಹರ ಹಾಗೂ GRBC ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ವಿ ಸಿ ಪತ್ತಾರ ಹಾಗೂ ಕಂದಾಯ ನಿರೀಕ್ಷಕರು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ