ಗೋಕಾಕ : ತಾಲೂಕು ಉಪ ಕಾರಾಗೃಹ ಹಾಗೂ ಕಾನೂನು ಸೇವಾ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
ನಗರದ ಉಪ ಕಾರಾಗೃಹ ಹಾಗೂ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ತಾರಕೇಶಗೌಡ ಎಸ್ ಪಾಟೀಲ. ಸಿಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಸೂರ್ಯಪ್ರಭಾ ಎಚ್.ಡಿ , ಹಾಗೂ ಉಪ ಕಾರಾಗೃಹದ ಅಧೀಕ್ಷಕರಾದ ಲಕ್ಷ್ಮೀ ಹಿರೇಮಠ. ಗೋಕಾಕ ವಲಯ ಅರಣ್ಯಾಧಿಕಾರಿ ಕೆ ವಣ್ಣೂರ ಹಾಗೂ ಅನೇಕರು ಉಪಸ್ಥಿತರಿದ್ದರು.