Breaking News

ಸರಕಾರದ ಆದೇಶದಂತೆ ಶ್ರೀ ಗಣೇಶೋತ್ಸವ ಹಬ್ಬವನ್ನು ಆಚರಿಸಿ : PSI ಖಿಲಾರೆ ಹೇಳಿಕೆ.


ಗೋಕಾಕ: ಕರೋನಾ ವೈರಸ್ ತೀವೃತೆಯಿಂದ ಈ ವರ್ಷದ ಶ್ರೀ ಗಣೇಶೋತ್ಸವ ಹಬ್ಬವನ್ನು ಸಾರ್ವಜನಿಕ ಶ್ರೀ ಗಣೇಶ್ ಮೂರ್ತಿಯನ್ನು ಪ್ರತಿಷ್ಠಾಪಿಸದೇ, ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ಸಮೀಪದ ದೇವಸ್ಥಾನಗಳಲ್ಲಿ ಪ್ರತಿಷ್ಠಾಪಿಸಬೇಕು. ಸರಕಾರದ ನಿಯಮ ಪಾಲನೆ ಮಾಡದೆ ಇದ್ದಲ್ಲಿ ಅಂತವರ ವಿರುದ್ಧ ಕಠೀಣ ಕಾನೂನು ಕ್ರಮ ಜರುಗಿಸಲಾಗುವದು ಎಂದು ಗೋಕಾಕ ಗ್ರಾಮೀಣ ಠಾಣೆಯ ಪಿಎಸ್‌ಐ ನಾಗರಾಜ ಖಿಲಾರೆ ಹೇಳಿದರು.ಶುಕ್ರವಾರದಂದು ನಗರದ ಗೋಕಾಕ ಗ್ರಾಮೀಣ ಠಾಣೆಯ ಆವರಣದಲ್ಲಿ ಗಣೇಶ ಚತುರ್ಥಿಯ ನಿಮಿತ್ಯವಾಗಿ ಕರೆದ ಶಾಂತಿ ಸಭೆಯನ್ನುದ್ದೇಶಿಸಿ ಮಾತನಾಡಿ, ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಸರಕಾರದ ಎಲ್ಲ ಇಲಾಖೆಯ ಜೊತೆಗೆ ಕೈಜೋಡಿಸಿ ಈ ಬಾರಿಯ ಸಾರ್ವಜನಿಕ ಗಣೇಶೋತ್ಸವ ಮಂಡಳಿಯವರು ಮಠ ಮಂದಿರಗಳಲ್ಲಿ ಪ್ರತಿಷ್ಠಾಪಿಸಬೇಕೆಂದು ತಿಳಿಸಿದರು.
ಗಣೇಶ ಪ್ರತಿಷ್ಠಾಪನೆ, ವಿಸರ್ಜನೆ ಹಾಗೂ ಪೂಜಾ ಸಮಯದಲ್ಲಿ ಗರೀಷ್ಠ ೫ ಜನ ಮಾತ್ರ ಭಾಗವಹಿಸಲು ಅವಕಾಶವಿದ್ದು, ಧ್ವನಿವರ್ಧಕ ಡಾಲ್ಬಿ, ನೃತ್ಯ, ಪಟಾಕಿ ಸಿಡಿಸುವದನ್ನು ಸರಕಾರ ಕಟ್ಟು ನಿಟ್ಟಾಗಿ ನಿರ್ಭಂಧಿಸಿದೆ. ೫ ಜನಕ್ಕಿಂತ ಹೆಚ್ಚು ಜನ ಭಾಗವಹಿಸಿದ್ದಲ್ಲಿ ಕಮೀಟಿಯ ಎಲ್ಲ ಸದಸ್ಯರುಗಳ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮಜರುಗಿಸಲು ಸರಕಾರ ಆದೇಶಿಸಿದೆ. ಹೀಗಾಗಿ ಈ ಬಾರಿಯ ಗಣೇಶೋತ್ಸವ ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನ ಮತ್ತು ಮನೆಗಳಲ್ಲಿ ಪ್ರತಿಷ್ಠಾಪಿಸುವಂತೆ ಮನವಿ ಮಾಡಿದರು.
ನಗರಸಭೆಯ ಅಧಿಕಾರಿ ತಾಂಬೂಳೆ ಮಾತನಾಡಿ, ಗಣೇಶ ಪ್ರತಿಷ್ಠಾಪಿಸಿದ ದೇವಸ್ಥಾನದಲ್ಲಿ ದಿನನಿತ್ಯ ಸ್ಯಾನಿಟೈಸರ್ ಸಿಂಪಡನೆ ಮಾಡುವದು, ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ಯಾನಿಂಗ ಮೂಲಕ ಪರೀಕ್ಷೆ ಮಾಡುವದು ಮತ್ತು ಮಣ್ಣಿನ ಗಣಪನನ್ನು ಪ್ರತಿಷ್ಠಾಪಿಸುವದು ಕಡ್ಡಾಯ. ಗಣೇಶ ವಿಸರ್ಜನೆಗೆ ಎಲ್ಲ ಏರ್ಪಾಡು ಮಾಡಿಕೊಡಲಾಗುವದು. ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಸಂಭಂಧಿಸಿದ ಎಲ್ಲ ಇಲಾಖೆಯ ಪರವಾಣಿಗೆ ಪಡೆದು ಗಣೇಶೋತ್ಸವ ಆಚರಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಗೋಕಾಕ ಸಬ್ ಜೈಲ್ (ಬಂಧಿಖಾನೆ) ನಿರೀಕ್ಷಕ ಅಂಬರೀಶ ಪೂಜಾರಿ, ಹೆಸ್ಕಾಂ ಅಧಿಕಾರಿ ವಿಠ್ಠಲ ಧರ್ಮಟ್ಟಿ ಸೇರಿದಂತೆ ಸಾರ್ವಜನಿಕ ಗಣೇಶ ಪ್ರತಿಷ್ಠಪನಾ ಮಂಡಳಿ ಸದಸ್ಯರುಗಳು ಇತರರು ಇದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ