ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಐಕ್ಯತೆ ಉಳಿಸಿಕೊಳ್ಳುವುದು ಒಕ್ಕೂಟದ ಉದ್ದೇಶವಾಗಿದೆ. ಎಲ್ಲರಿಗೂ ಸಮಾನ ಅವಕಾಶ ಸಿಗುವಂತಾಗಲು ಸರಕಾರ ಪಾರದರ್ಶಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಆಶಿಸುತ್ತೇವೆ ಆದರೆ ಕೆಲ ಶಕ್ತಿಗಳು ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಸಮುದಾಯಗಳಲ್ಲಿ ಪರಸ್ಪರ ದ್ವೇಷ ಹುಟ್ಟು ಹಾಕಲು ಯತ್ನಿಸುತ್ತಿದೆ. ಲಂಬಾಣಿ, ಬೋವಿ, ಕೊರಚು ಮತ್ತು ಕೊರಮ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ತೆಗೆದು ಹಾಕಬೇಕೆಂಬ ಅನಗತ್ಯ ಚರ್ಚೆಯನ್ನು ಹುಟ್ಟುಹಾಕಲಾಗಿದೆ. ವರ್ಗೀಕರಣ, ಕೆನೆಪರದೆ, ಮತ್ತಿತರ ವಿಚಾರಗಳನ್ನು ಹರಿಬಿಟ್ಟು ನಮ್ಮ ಐಕ್ಯತೆ ಚಿದ್ರಗೊಳಿಸಿ, ಹೋರಾಟಗಳನ್ನು ಹತ್ತಿಕ್ಕುವ ದುರುದ್ದೇಶದಿಂದ ಆಗಿ ಕೆಲವರು ಪರಿಶಿಷ್ಟರ ಒಡೆದು ಆಳಲು ಪ್ರಯತ್ನಿಸುತ್ತಿದ್ದಾರೆ. ತಾವುಗಳು ನಮ್ಮ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಕ್ಕೆ ಸಂತೋಷ ಪಡುತ್ತಿದ್ದೇವೆ. ನಮ್ಮ ಧ್ವನಿಯಾಗುವಿರೆಂದು ಆಶಿಸುತ್ತೇವೆ. ಪರಿಶಿಷ್ಟ ಜಾತಿ ಯಲ್ಲಿರುವ ನಮ್ಮ ಸಮುದಾಯಗಳ ಭಾವನೆಗೆ ದಕ್ಕೆ ಆಗುತ್ತಿರುವ ಈ ಸಂದರ್ಭದಲ್ಲಿ ನಮ್ಮ ಪರವಾಗಿ ಧ್ವನಿ ಹತ್ತಬೇಕೆಂದು ಕೋರಿ ಅತ್ಯಂತ ಕಳಕಳಿಯಿಂದ ಮನವಿ ಪತ್ರವನ್ನು ಸಲ್ಲಿಸುತ್ತಿದ್ದೇವೆ.*
*ಇದೇ ಸಂದರ್ಭದಲ್ಲಿ ಇನ್ನು ಹಲವಾರು ಬೇಡಿಕೆಗಳನ್ನು ಕೇಳಿಕೊಂಡರು,*
*ನ್ಯಾ. ಸದಾಶಿವ ಆಯೋಗದ ವರದಿಯ ಬಹಿರಂಗ ಚರ್ಚೆಯಿಲ್ಲದೆ ಏಕಪಕ್ಷೀಯವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬಾರದು,*
*ನ್ಯಾ. ಸದಾಶಿವ ಆಯೋಗದ ವರದಿಯನ್ನು ಸಾರ್ವಜನಿಕ ಚರ್ಚೆಗೆ ಬಿಡಬೇಕು. ಪರಿಶಿಷ್ಟ ಜಾತಿ 101 ಸಮುದಾಯಗಳಿಗೆ ಮತ್ತು ಆಸಕ್ತರಿಗೆ, ಸಂಘ-ಸಂಸ್ಥೆಗಳಿಗೆ ವರದಿಯ ದೃಢೀಕೃತ ಪ್ರತಿಯನ್ನು ನೀಡಬೇಕು. ಅಕ್ಷೇಪಕ, ತಕರಾರು ಮತ್ತು ನ್ಯಾಯಸಮ್ಮತೆ ತಿದ್ದುಪಡಿಗಳನ್ನು ಸೂಚಿಸಲು ಕಾಲಾವಕಾಶ ನೀಡಬೇಕು.*
*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು ಮಾಡಿರುವ ನ್ಯಾ.ನಾಗಮೋಹನ ದಾಸ್ ಅವರ ವರದಿಯನ್ನು ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಬೇಕು.*
*ರಾಜ್ಯದ ಎಲ್ಲ ಜಾತಿ, ಜನಾಂಗ ಬುಡಕಟ್ಟುಗಳ;ವಾಸ್ತವ ಸ್ಥಿತಿಗಳನ್ನು ಅರಿಯುವಂತಾಗಲಿ ಹಿಂದಿನ ಸರ್ಕಾರ ತಯಾರಿಸುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ವರದಿಯನ್ನು ಬಿಡುಗಡೆ ಮಾಡಬೇಕು.*
*ಈ ಎಲ್ಲ ಬೇಡಿಕೆಗಳನ್ನು ಈಡೇರಿಸಲು ತಾವು ವಿಧಾನಸಭಾ ಅಧಿವೇಶನದಲ್ಲಿ ಮತ್ತು ಸರಕಾರದ ಮೇಲೆ ಒತ್ತಡವನ್ನು ತಂದು 99 ಸಮುದಾಯಗಳ ಹಿತ ಕಾಪಾಡಲು ಶ್ರಮಿಸಬೇಕೆಂದು ಮನವಿಯಲ್ಲಿ ಉಲ್ಲೇಖಿಸಲಾಗಿತ್ತು.*