Breaking News

ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ!


ಬೆಂಗಳೂರು : ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವದ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಸಾರ್ವಜನಿಕ ಗಣೇಶ ಹಬ್ಬ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ.

ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆಯಲ್ಲಿ ರ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದ್ದು, ಸಾರ್ವಜನಿಕ ಗಣೇಶೋತ್ಸವ ಕೇವಲ ಮೂರು ದಿನ ಮಾತ್ರ ಅವಕಾಶ ನೀಡಲಾಗಿದೆ.

ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ವರದಿ ಆಧರಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ನಿರ್ಧಾರ ಕೈಗೊಂಡಿದ್ದು, ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ 5 ದಿನ ಮಾತ್ರ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡಲಾಗಿದ್ದು, ಮೆರವಣಿಗೆಗೆ ಅವಕಾಶ ಇಲ್ಲ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಮನೋರಂಜನೆ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ, ಪ್ರತಿಷ್ಠಾಪನೆ ಮಾಡಬಹುದು. ಆದರೆ ಮೆರವಣಿಗೆ ಮಾಡುವಂತಿಲ್ಲ. ಸ್ಟೇಜ್ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ. ಜಿಲ್ಲಾಡಳಿತ ಸೂಚಿಸಿದ ಸ್ಥಳದಲ್ಲೇ ಗಣೇಶ ವಿಸರ್ಜನೆ ಮಾಡಬೇಕು ಎಂದು ಗೈಡ್ ಲೈನ್ ನೀಡಲಾಗಿದೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಏಕಾಏಕಿ ವಾಹಣ ತಡೆಯುವಂತಿಲ್ಲ; ಪೋಲಿಸರಿಗೆ ಡಿಜಿಪಿ ಪ್ರವೀಣ್ ಸೂದ್ ಸೂಚನೆ!

ಬೆಂಗಳೂರು: ನಗರದ ವಾಹನ ಸವಾರರಿಗೆ ಗುಡ್ ನ್ಯೂಸ್ ಇಲ್ಲಿದೆ. ಅನಗತ್ಯ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ