ಪಣಜಿ: ಗೋವಾದ ಮಾಪ್ಸಾದಲ್ಲಿ ಭಾನುವಾರ ಮುಂಜಾನೆ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಚಲಿಸುತ್ತಿದ್ದ ಬೆಳಗಾವಿ ಮೂಲದ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.
ಅನಗೋಳಕರ್ (28), ರೋಹನ್ ಗದಗ (26), ಸನ್ನಿ ಅಣವೇಕರ್ (31) ಮೃತಪಟ್ಟ ದುರ್ದೈವಿಗಳು.ಕಾರಿನಲ್ಲಿದ್ದ ವಿಶಾಲ ಕಾರೇಕರ್ ಎಂಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬೆಳಗಿನ ಜಾವ ಸುಮಾರು 4 ಗಂಟೆಯ ವೇಳೆ ಮಾಪ್ಸಾದ ಕುಚೇಲಿಯಲ್ಲಿ ಕಾರು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ವಿಶಾಲ್ ರವರನ್ನು ಗೋವಾದ ಬಾಂಬೋಲಿಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
CKNEWSKANNADA / BRASTACHARDARSHAN CK NEWS KANNADA