ಗೋಕಾಕ : ಗೌರಿ ಗಣೇಶ ಚತುರ್ಥಿ ಹಬ್ಬದ ಹಿನ್ನಲೆಯಲ್ಲಿ, ವಿವಿಧ ಇಲಾಖೆಗಳ ಸಮನ್ವಯಕ್ಕಾಗಿ ಸೂಚನೆಗಳು ಹಾಗೂ ನಗರದ ಎಲ್ಲಾ ಗಣೇಶ ಮಂಡಳಿಗಳ ಆಯೋಜಕರ ಸಭೆಯನ್ನು ತಾಲೂಕು ಪಂಚಾಯತ್ ಕಾರ್ಯಾಲಯದಲ್ಲಿ ನಡೆಸಲಾಯಿತು.
ಗಣೇಶ ಮೂರ್ತಿ ಪ್ರತಿಷ್ಠಾಪನೆಯ ವೇಳೆ ಆಯೋಜಿಸುವ ಅಯೋಜಕರಿಗೆ ಪರವಾಹನಿಗೆ ನೀಡುವುದು ವಿವಿಧ ಇಲಾಖೆಗಳ ಬಹುದೊಡ್ಡ ಜವಾಬ್ದಾರಿಯಾಗಿರುತ್ತದೆ. ಈ ಕಾರ್ಯವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಈ ಕೆಳಕಂಡಂತೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ತಹಶೀಲ್ದಾರ್ ಪ್ರಕಾಶ್ ಹೊಳ್ಳಪ್ಪಗೋಳ ಅವರು ತಿಳಿಸಿದ್ದಾರೆ.
*ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್, ವಿದ್ಯುತ್ ಸಂಪರ್ಕದ ಪರವಾನಗಿಯನ್ನು ನೀಡಲು ಕಂದಾಯ, ಲೋಕೋಪಯೋಗಿ, ಇಂಧನ, ಅಗ್ನಿಶಾಮಕ ಮತ್ತು ಪೊಲೀಸ್ ಇಲಾಖೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಂಯೋಜಿತವಾಗಿ ಗಣೇಶ ವಿಗ್ರಹ ಸ್ಥಾಪನೆಗೆ ಅಗತ್ಯವಿರುವ ಪರವಾನಗಿಯನ್ನು ಏಕಗವಾಕ್ಷಿ ಅಡಿಯಲ್ಲಿ ನೀಡಲು ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದೆ.
*ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಪ್ರತಿ ವಾರ್ಡ್ ಗಳ ಮಟ್ಟದಲ್ಲಿ ಸಂಬಂಧಿಸಿದ ವಿವಿಧ ಇಲಾಖೆಗಳ ಪ್ರತಿನಿಧಿಗಳನ್ನು ಒಳಗೊಂಡಂತೆ ಏಕ ಗವಾಕ್ಷಿ ವ್ಯವಸ್ಥೆಯನ್ನು ಸ್ಥಾಪಿಸಿ, ಪ್ರಚುರ ಪಡಿಸುವುದು.
*ಕಾರ್ಯಕ್ರಮದ ಆಯೋಜಕರು ನಿಗಧಿತ ನಮೂನೆಯಲ್ಲಿ ಮುಂಚಿತವಾಗಿ ಅರ್ಜಿ ಸಲ್ಲಿಸುವುದು ಹಾಗೂ ಆಯೋಜಕರು ಸಲ್ಲಿಸುವ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳು ಜಂಟಿ ತಪಾಸಣೆ ಮಾಡಿ, ಮೂರು ದಿನಗಳೊಳಗಾಗಿ ನಿಯಮಾನುಸಾರ ಪರವಾನಗಿ ನೀಡಲು ಕ್ರಮ ಕೈಗೊಳ್ಳುವುದು.
*ಪರವಾನಗಿ ನೀಡುವ ಮುನ್ನ ಆಯೋಜಕರಿಂದ ಕಾಲಕಾಲಕ್ಕೆ ನ್ಯಾಯಲಾಯದ ನಿರ್ದೇಶನಗಳನ್ನು ಹಾಗೂ ಸರ್ಕಾರದ ವಿವಿಧ ಇಲಾಖೆಗಳಿಂದ ನೀಡಿರುನವ ಸೂಚನೆಗಳನ್ನು ಪಾಲಿಸುವ ಬಗ್ಗೆ ಮುಚ್ಚಳಿಕೆಯನ್ನು ಪಡೆಯವುದು.
*ಸಾರ್ವಜನಿಕ ಸುರಕ್ಷಿತ ಹಾಗೂ ಪರಿಸರ ಮಾಲಿನ್ಯ ಉಂಟಾಗದ ರೀತಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಆಯೋಜಕರಿಂದ ಖಾತರಿಪಡಿಸಿಕೊಳ್ಳುವುದು
*ಅಗತ್ಯವಿರುವ ಕಡೆ ಸಿಸಿ ಕ್ಯಾಮರಾಗಳನ್ನು ಅಳವಡಿಸುವಂತೆ ಆಯೋಜಕರಿಗೆ ಸೂಚಿಸುವುದು
ವಿಶೇಷವಾಗಿ ಹೈ-ಟೆನ್ಷನ್ ತಂತಿ ಹಾದು ಹೋಗಿರುವ ಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಗಣೇಶ ಮೂರ್ತಿಯನ್ನು ಸ್ಥಾಪಿಸಲು ಅನುಮತಿ ನೀಡದಿರುವುದು.
*ಉತ್ಸವಕ್ಕೆ ಮುಂಚಿತವಾಗಿ ನಾಗರೀಕ ಸಮಿತಿ, ಮೊಹಲ್ಲಾ ಸಮಿತಿ, ಕಾವಲು ಸಮಿತಿ ಮತ್ತಿತರ ಎಲ್ಲಾ ಸಂಘಸಂಸ್ಥೆಗಳ ಮುಖ್ಯಸ್ಥರನ್ನು ಒಳಗೊಂಡಂತೆ ಕೋಮು ಸೌಹಾರ್ಧ ಸಭೆಗಳನ್ನು ಆಯೋಜಿಸುವಂತೆ ಕ್ರಮ ವಹಿಸಲು, ಕಟ್ಟು ನಿಟ್ಟಾಗಿ ಪಾಲಿಸಲು ತಿಳಿಸಿದೆ.
ಈ ಸಂದರ್ಭದಲ್ಲಿ ಡಿವಾಯ್ಎಸ್ಪಿ ಮನೋಜಕುಮಾರ್ ನಾಯ್ಕ್, ಪೌರಾಯುಕ್ತ ಶಿವಾನಂದ ಹಿರೇಮಠ, ಗಜಾಕೋಸ, ಸಿಪಿಐ ಗೋಪಾಲ ರಾಠೋಡ, ಪಿಎಸ್ಐ ಗಳಾದ ಎನ್ ಖಿಲಾರೆ, ಎಂ ಡಿ ಘೋರಿ, ಹಿರಿಯರಾದ ಚವ್ಹಾಣ್ ಹಾಗೂ ನಗರದ ಗಜಾನನ ಮಂಡಳಿಯ ಮುಖಂಡರು ಉಪಸ್ಥಿತರಿದ್ದರು.