ಗೋಕಾಕ: ಕೊವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕರು ಮತ್ತು ಪ್ರವಾಸಿಗರ ಆರೋಗ್ಯದ ಹಿತ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಗೋಕಾಕ ತಾಲೂಕಿನ ಗೋಕಾಕ ಫಾಲ್ಸ್, ದೂಪದಾಳ ಹಾಗೂ ಗೊಡಚಿನಮಲ್ಕಿ ಪ್ರವಾಸಿ ತಾಣಗಳಿಗೆ ವಾರಾಂತ್ಯ ಶನಿವಾರ, ರವಿವಾರ ಮತ್ತು ಸಾರ್ವಜನಿಕ ರಜೆ ದಿನಗಳಂದು ಸಾರ್ವಜನಿಕ ವೀಕ್ಷಣೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಬೆಳಗಾವಿ ಇವರು ಆದೇಶ ಹೊರಡಿಸಿದ್ದಾರೆ.
ಈ ಸ್ಥಳಗಳಿಗೆ ಮಹಾರಾಷ್ಟ್ರ ರಾಜ್ಯದಿಂದ ಮತ್ತು ರಾಜ್ಯದ ಬೇರೆ ಬೇರೆ ಸ್ಥಳಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವುದರಿಂದ ಮುಂಬರುವ ದಿನಗಳಲ್ಲಿ ಕೊವಿಡ್-19 ವೈರಾಣುವಿನ ಪ್ರಕರಣಗಳು ಹೆಚ್ಚಾಗುವ ಸಾದ್ಯತೆಗಳು ಇರುವುದರಿಂದ ಮುಂದಿನ ಆದೇಶ ಆಗುವವರೆಗೆ ಸದರಿ ನಿರ್ಭಂದ ವಿಧಿಸಲಾಗಿದೆ.
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಕಲಂ 188 ರ ಪ್ರಕಾರ ಕ್ರಮಕ್ಕೆ ಅವಕಾಶವಿರುತ್ತದೆ ಎಂದು ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದ್ದಾರೆ .