ಸರ್ಕಾರಿ ಕಛೇರಿಗಳಲ್ಲಿ ಫೋಟೋ ಹಾಗೂ ವಿಡಿಯೋಗ್ರಫಿಯನ್ನು ನಿಷೇಧಿಸಿ ಆಡಳಿತ ಸುಧಾರಣಾ ಇಲಾಖೆ ತೀರ್ಮಾನಿಸಿದೆ ಎಂದು ಹೇಳಲಾಗಿದೆ. ಈ ರೀತಿ ಮೊಬೈಲ್ ಮೂಲಕ ತೆಗೆದ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಆದರೆ ಈ ಕ್ರಮಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗುತ್ತಿದ್ದು, ಇದರಿಂದ ಲಂಚಬಾಕ ಅಧಿಕಾರಿಗಳಿಗೆ ಅನುಕೂಲವಾಗಲಿದೆ. ಕಡೆ ಪಕ್ಷ ಈವರೆಗೆ ಲಂಚ ತೆಗೆದುಕೊಳ್ಳುತ್ತಿರುವ ತಮ್ಮ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಂದರೆ ಮರ್ಯಾದೆ ಹೋಗುತ್ತದೆ ಎಂಬ ಕಾರಣಕ್ಕಾದರೂ ಲಂಚ ಪಡೆಯಲು ಹಿಂದೇಟು ಹಾಕುತ್ತಿದ್ದರು. ಹಾಗಾಗಿ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಲಿ ಎಂದು ಆಗ್ರಹಿಸಿದ್ದಾರೆ.