ಗೋಕಾಕ: ಗೋಕಾಕ ತಾಲೂಕಾ ಪ್ರಾಥಮಿಕ ಆರೋಗ್ಯ ಕೆಂದ್ರದ ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರ ನೇತೃತ್ವದಲ್ಲಿ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಗೋಕಾಕ ನಗರಸಭೆಯ ಆಯುಕ್ತರಾದ ಶಿವಾನಂದ ಹೀರೆಮಠ ಇವರು ರಿಬ್ಬನ್ ಕಟ್ ಮಾಡಿ ನಗರಸಭೆಯ ಉಪಾದಕ್ಷ ಬಸವರಾಜ ಆರೆನ್ನವರ ಇವರು ಬ್ಯಾಂಡ ಬಾರಿಸುವ ಮೂಲಕ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು,
ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತರು ನಾಳೆ ದಿನ ಜನೆವರಿ 31 ರವಿವಾರದಂದು ಸ್ಥಳಿಯ ಪ್ರಾಥಮಿಕ ಆರೋಗ್ಯ ಕೆಂದ್ರದಲ್ಲಿ 5 ವರ್ಷದ ಒಳಗಿನ ಮಕ್ಕಳಿಗೆ ಎಲ್ಲರೂ ಪಲ್ಸ್ ಪೋಲಿಯೋ ಲಸಿಕೆ ಹಾಕಿ ಮಾರಕ ರೋಗ, ಅಂಗವೈಪಲ್ಯದಿಂದ ದೂರವಿರಲು ಘೊಷಣೆ ವಾಕ್ಯಗಳೊಂದಿಗೆ ಗೋಕಾಕದ ಪ್ರಮುಖ ಬೀದಿಗಳಲ್ಲಿ ಸುತ್ತಾಡಿ ಪ್ರಚಾರ ಮಾಡಿದರು.
ಈ ಸಂದರ್ಭದಲ್ಲಿ ಸ್ಥಳಿಯ ವೈದ್ಯಾಧಿಕಾರಿಯಾದ ಡಾ: ಅಂಟಿನ್, ತಾಲೂಕಾ ವೈದ್ಯಾಧಿಕಾರಿಯಾದ ಡಾ: ಕೊಪ್ಪದ, ನೂರಾರು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ಸ್ಕೌಡ್ಸ ಗೈಡ್ಸ್ ವಿದ್ಯಾರ್ಥಿಗಳು ಗೋಕಾಕ ಸರಕಾರಿ ಪ್ರಾಥಮಿಕ ಆರೋಗ್ಯ ಕೆಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.