“ಕೊವಿಡ್ ಹಾಗೂ ಪ್ರವಾಹಗಳು ತಂದೊಡ್ಡಿದ ಮಹಾಪರೀಕ್ಷೆ ಎದುರಿಸಲು ನಾವು ಸಂಪೂರ್ಣ ಬದ್ಧತೆಯೊಂದಿಗೆ ಸಿದ್ಧ”
ಬೆಳಗಾವಿ ಜಿಲ್ಲೆಯ ಪ್ರವಾಸಿ ಮಂದಿರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕೋವಿಡ್-19 ನಿಯಂತ್ರಣ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸುವ ಕ್ರಮಗಳ ಕುರಿತು ಚರ್ಚಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು.
ಜಿಲ್ಲೆಯ ಖಾಸಗೀ ಆಸ್ಪತ್ರೆಗಳು ಕೋವಿಡ್ ಹಾಗೂ ಇತರ ಚಿಕಿತ್ಸೆಗೆ ಮುಂದಾಗುತ್ತಿರುವುದು ಸಂತಸದ ಸಂಗತಿ. ಹೀಗೆ ಸ್ವಯಂಪ್ರೇರಿತವಾಗಿ ಮುಂಬರುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಅಲ್ಲಿರುವ ಸೌಲಭ್ಯಗಳನ್ನು ಪರಿಶೀಲಿಸಿ, ಮಾರ್ಗಸೂಚಿ ಪ್ರಕಾರ ತಕ್ಷಣವೇ ಅನುಮತಿ ನೀಡಬೇಕು. ಪ್ರತಿ ತಾಲ್ಲೂಕಿಗೆ ಒಂದರಂತೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯವಿದ್ದರೆ ತುರ್ತು ಚಿಕಿತ್ಸೆಗೆ ಅನುಕೂಲವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಲಾಯಿತು. ಜೊತೆಗೆ ನಿಸ್ವಾರ್ಥ, ಸೇವಾ ಮನೋಭಾವ ಮೆರೆಯುತ್ತಿರುವ ಖಾಸಗೀ ಆಸ್ಪತ್ರೆಗಳು ಹಾಗೂ ವೈದ್ಯಕೀಯ ವೃಂದವನ್ನು ಶ್ಲಾಘಿಸಲಾಯಿತು.
ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಸಂಭವ ಎದ್ದು ಕಾಣಿಸುತ್ತಿದ್ದು, ಇದರ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಕಲ್ಯಾಣ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ,ಚಿಕ್ಕೋಡಿ ಲೋಕಸಭೆ ಸಂಸದರಾದ ಶ್ರೀ ಅಣ್ಣಾಸಾಹೆಬ್ ಜೊಲ್ಲೆ, ಶಾಸಕರಾದ ಶ್ರೀ ದುರ್ಯೋಧನ ಐಹೊಳೆ, ಬೆಳಗಾವಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಸಂಜಯ್ ಪಾಟೀಲ್, ಜಿಲ್ಲಾಧಿಕಾರಗಳಾದ ಶ್ರೀ ಎಂ. ಜಿ ಹಿರೇಮಠ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ದರ್ಶನ್ ಎಚ್.ವಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಲಕ್ಷ್ಮಣ ನಿಂಬರಗಿ, ಕರ್ನಾಟಕ ನೀರಾವರಿ ನಿಗಮದ ಉತ್ತರ ವಲಯದ ಮುಖ್ಯ ಎಂಜಿನಿಯರ್ ಗಳಾದ ಶ್ರೀ ಅರವಿಂದ ಕಣಗಲಿ, ಅಪರ ಜಿಲ್ಲಾಧಿಕಾರಿ ಶ್ರೀ ಅಶೋಕ ದುಡಗುಂಟಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶ್ರೀ ಶಿವನಗೌಡ ಪಾಟೀಲ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಶ್ರೀ ಡಾ. ತುಕ್ಕಾರ, ನೀರಾವರಿ ಇಲಾಖೆಯ ಎಂಜಿನಿಯರ್ ಶ್ರೀ ಸಿ.ಡಿ. ಪಾಟೀಲ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.