ಬೆಂಗಳೂರು : ಇತ್ತೀಚೆಗೆ ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕಮಾಡಿ ರಾಷ್ಟ್ರಪತಿಗಳು ಆದೇಶಿಸಿದ್ದರು.
ಇಂತಹ ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕಗೊಂಡಂತ ಥಾವರ್ ಚಂದ್ ಗೆಹ್ಲೋಟ್ ಅವರು, ಇಂದು ಬೆಳಿಗ್ಗೆ 10.30ಕ್ಕೆ ಪದಗ್ರಹಣಕ್ಕೆ ಸಮಯ ನಿಗದಿ ಪಡಿಸಲಾಗಿದೆ.ಈ ಕುರಿತಂತೆ ವಾರ್ತಾ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಕರ್ನಾಟಕ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಂತ ತಾವರ್ ಚಂದ್ ಗೆಹ್ಲೋಟ್ ಅವರು, ಜುಲೈ.11ರಂದು ಬೆಳಿಗ್ಗೆ 10.30ಕ್ಕೆ ರಾಜಭವನದ ಗ್ಲಾಸ್ ಹೌಸ್ ನಲ್ಲಿ ನಿಗದಿಯಾಗಿರುವಂತ ಸರಳ ಸಮಾರಂಭದಲ್ಲಿ ಪದಗ್ರಹಣ ಮಾಡಲಿದ್ದಾರೆ.
ಕರ್ನಾಟಕದ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಅವರು ನೂತನ ರಾಜ್ಯಪಾಲರಿಗೆ ಪ್ರಮಾಣ ವಚನ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂಬುದಾಗಿ ತಿಳಿಸಿದೆ.