Breaking News

ಕಲಿಕೆ ನೆಪದಲ್ಲಿ ಹಿಂದಿ ಭಾಷೆ ಹೇರಿಕೆ ಸರಿಯಲ್ಲ: ಪವನ ಮಾಹಾಲಿ೦ಗಪುರ.


ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ.

ಇಂದಿನ ಹಿಂದಿ ದಿವಸ್ ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ ಎಂದು ‌ಕನಾ೯ಟಕ ರಕ್ಷಣಾ ವೇದಿಕೆ ಗಜಸೇನೆ ಉತ್ತರ ಕರ್ನಾಟಕ ಯುವ ಘಟಕ ಅಧ್ಯಕ್ಷರಾದ ಪವನ ಮಾಹಾಲಿ೦ಗಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .ಈ ವಿಚಾರವಾಗಿ ಹಿಂದಿ ರಾಷ್ಟ್ರಭಾಷೆಯಲ್ಲ. ರಾಷ್ಟ್ರಭಾಷೆ ಎಂಬ ಕಲ್ಪನೆ ಸಂವಿಧಾನದಲ್ಲಿಲ್ಲ. ಆದರೂ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಬಿಂಬಿಸುವ, ಅದರಲ್ಲಿ ರಾಜಕೀಯ ಮಾಡುವ ಪ್ರಯತ್ನ ಹಿಂದಿನಿಂದಲೂ ನಡೆದೇ ಬಂದಿದೆ. ಅದು ಈಗ ವಿಪರೀತಕ್ಕೆ ಹೋಗಿದೆ. ದೇಶದ ಇತರೇ ಭಾಷಿಕರು ಇಂಥ ಪ್ರಯತ್ನಗಳ ವಿರುದ್ಧ ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು ಎಂದಿದ್ದಾರೆ.

ಹಿಂದಿ ಹೇರಿಕೆಗೆ ಕಲಿಕೆ ನೆಪ ನೀಡಲಾಗುತ್ತಿದೆ. ಕಲಿಕೆ ಎಂದಿಗೂ ಆಯ್ಕೆಯೇ ಹೊರತು ಹೇರಿಕೆಯಿಂದ ಕಲಿಕೆಯಾಗಲು ಸಾಧ್ಯವಿಲ್ಲ. ಭಾಷೆಯೊಂದರ ಹೇರಿಕೆಯು ಇನ್ನೊಂದು ಭಾಷೆಯ ಅಸ್ಮಿತೆಯನ್ನು ಪ್ರಶ್ನಿಸುವಂತಿರಬಾರದು. ಭಾಷೆಯ ಹೇರಿಕೆಯು ಮತ್ತೊಂದು ಭಾಷೆಯ ಅವಸಾನಕ್ಕೆ ದಾರಿಯಾಗಬಾರದು. ದೇಶದ ಸಂಸ್ಕೃತಿ, ವೈವಿದ್ಯತೆ, ಸಮಗ್ರತೆಗೆ ಧಕ್ಕೆ ತರಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ