ಶಿವಮೊಗ್ಗ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಕೆ.ಎಸ್.ಈಶ್ವರಪ್ಪ, ನನ್ನನ್ನು ಯಾರೂ ಏನೂ ಮಾಡಲು ಆಗದು, ನಾನು ಮೊದಲಿನಿಂದಲೂ ಹೋರಾಟ ಮಾಡಿಕೊಂಡು ಬಂದವನು ಎಂದು ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ, ನನ್ನ ವಿರುದ್ಧ ಷಡ್ಯಂತ್ರ ನಡೆದರೂ ತಲೆ ಕೆಡಿಸಿಕೊಳ್ಳಲ್ಲಾ, ಅಧಿಕಾರ ಹೋದರೆ ಗೂಟ ಹೋಯ್ತು ಅಂದುಕೊಳ್ತೀನಿ. ನಾನು ಗೂಟಕ್ಕೆ ಅಂಟಿಕೊಂಡಿಲ್ಲ ಎಂದು ಗರಂ ಆಗಿದ್ದಾರೆ.
ನನಗೆ ನಮ್ಮ ಪಕ್ಷದ ಅಧ್ಯಕ್ಷರ ಬಗ್ಗೆ ನಂಬಿಕೆಯಿದೆ.ಆಡಿಯೋ ಬಗ್ಗೆ ಅಧ್ಯಕ್ಷರೇ ತನಿಖೆ ನಡೆಸಲಿ ಎಂದಿದ್ದಾರೆ. ಯಾರು ಆಡಿಯೋ ಸೃಷ್ಟಿ ಮಾಡಿದ್ದಾರೆ ಗೊತ್ತಿಲ್ಲ. ತನಿಖೆಯಾಗಲಿ ಸತ್ಯಾಂಶ ಹೊರಬರಲಿ ಎಂದು ಹೇಳಿದ್ದಾರೆ.
CKNEWSKANNADA / BRASTACHARDARSHAN CK NEWS KANNADA