ಗೋಕಾಕ : ತಾಲೂಕಿನ ಗಣೇಶವಾಡಿ ಗ್ರಾಮದಲ್ಲಿ ಇಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದ್ದರು.
ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಸತೀಶ್ ಧ್ವನಿ ಪತ್ರಿಕೆ ಹಾಗೂ ಸುದ್ದಿ ವಾಹಿನಿಯ ತಂಡ ಉಚಿತ ಅರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಂಡಿದ್ದರು.
ಈ ಕಾರ್ಯಕ್ರಮವನ್ನು ಸುತ್ತಮುತ್ತಲಿನ ಗ್ರಾಮದ ಸಾರ್ವಜನಿಕರು ಸದುಪಯೋಗ ಪಡೆದುಕೊಂಡು ತಮ್ಮ ಆರೋಗ್ಯವನ್ನು ತಪಾಸಣಾ ಮಾಡಿಸಿಕೊಂಡು ಯಶಸ್ವಿಗೊಳಿಸಿದರು.
ನಂತರ ಕಾರ್ಯಕ್ರಮದ ಆಯೋಜಕರಿಗೆ ಹಾಗೂ ಅತಿಥಿಗಳಿಗೆ ಸತ್ಕಾರ ಮಾಡಲಾಯಿತು.
ಈ ಕಾರ್ಯಕ್ರಮದ ಉದ್ಘಾಟಕರಾಗಿ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕರಾದ ಪಾಂಡು ಮಣ್ಣಿಕೇರಿ ಮತ್ತು ಬಾಳೆಶ ದ್ಯಾಮಣ್ಣವರ, ರಮೇಶ ಹರಿಜನ ಸೇರಿದಂತೆ ಊರಿನ ಮುಖಂಡರು ರೈತರು ಯುವಕರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.