ಬೆಳಗಾವಿ: ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಕೃಷ್ಣಾ, ದೂದಗಂಗಾ, ವೇದಗಂಗಾ, ಹೀರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲಿ ಭಾರಿ ಏರಿಕೆ ಕಂಡಿದೆ. ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ ತಾಲೂಕುಗಳ 8 ಸೇತುವೆಗಳು ಜಲಾವೃತಗೊಂಡಿದ್ದು, ನದಿ ತೀರದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.
ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಯಡೂರು-ಕಲ್ಲೋಳ ಸೇತುವೆ ಮುಳಗಡೆಯಾಗಿದೆ. ಕೃಷ್ಣಾ ನದಿಗೆ 70 ಸಾವಿರ ಕ್ಯೂಸೆಕ್ಗೂ ಹೆಚ್ಚಿನ ಪ್ರಮಾಣದ ಒಳ ಹರಿವು ಬಂದಿದೆ. ದೂದಗಂಗಾ, ವೇದಗಂಗಾ ಹಾಗೂ ಹೀರಣ್ಯಕೇಶಿ ನದಿಗಳಿಗೆ ಅಡ್ಡಲಾಗಿ ನಿರ್ಮಿಸಿರುವ ಜತ್ರಾಟ-ಭೀವಶಿ, ಭೋಜ-ಕಾರದಗಾ, ಅಕ್ಕೋಳ-ಸಿದ್ನಾಳ, ನಾಗನೂರು- ಗೋಟೂರ, ಹುನ್ನರಗಿ-ಮಮದಾಪೂರ, ಭೋಜವಾಡಿ-ಕುನ್ನೂರ, ಮಲಿಕವಾಡ- ದತ್ತವಾಡ ಸೇತುವೆಗಳು ಮುಳುಗಡೆಯಾಗವೆ.