ಮಂಡ್ಯ: ಸಿಎಂ ಬಿಎಸ್ ಯಡಿಯೂರಪ್ಪ ಇಂದು ಮಂಡ್ಯ ಜಿಲ್ಲೆಯಲ್ಲಿರುವ ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದಾರೆ. ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ್ದಾರೆ. ಸತತ 5 ಬಾರಿ ಸಿಎಂ ಬಿಎಸ್ವೈ ಕಾವೇರಿ ನದಿಗೆ ಬಾಗಿನ ಅರ್ಪಿಸಿದ್ದಾರೆ. ಇದರೊಂದಿಗೆ ಕಾವೇರಿ ನದಿಗೆ ಅತೀ ಹೆಚ್ಚು ಸಲ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದಾರೆ.

ಬಳಿಕ ಸಿಎಂ ಬಿಎಸ್ವೈ ಎಚ್.ಡಿ.ಕೋಟೆಯ ಕಬಿನಿ ಜಲಾಶಯಕ್ಕೆ ಭೇಟಿ ನೀಡಿದರು. ಅಲ್ಲಿಯೂ ಸಹ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಬಳಿಕ ಕಬಿನಿ ಜಲಾಶಯದ ಬಳಿ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ನೇರವಾಗಿ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಿದರು.ಇನ್ನು, ಸಿಎಂ ಆಗಮನದ ಹಿನ್ನಲೆ ಕೆಆರ್ಎಸ್ ಡ್ಯಾಂ ಬಳಿ ಬಿಗಿಭದ್ರತೆ ಒದಗಿಸಲಾಗಿತ್ತು.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆ.ಆರ್.ಎಸ್. ಗೆ ಆಗಮಿಸಿದ ಸಿಎಂ ಯಡಿಯೂರಪ್ಪ ಬಾಗಿನ ಅರ್ಪಿಸಿದರು.ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಂಸದರುಗಳಾದ ಸುಮಲತಾ, ಪ್ರತಾಪ್ ಸಿಂಹ, ಮೊದಲಾದವರು ಸಾಥ್ ನೀಡಿದರು.
CKNEWSKANNADA / BRASTACHARDARSHAN CK NEWS KANNADA