ಸುಬ್ರಹ್ಮಣ್ಯ: ನಿರಂತರ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.
ಕಳೆದ 4 ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಸುಬ್ರಹ್ಮಣ್ಯ ಅಲ್ಲದೆ ಘಟ್ಟ ಪ್ರದೇಶ ಹಾಗೂ ಕುಮಾರ ಪರ್ವತದಲ್ಲಿ ಭಾರಿ ಮಳೆಯಿಂದಾಗಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ.
ಕ್ಷೇತ್ರಕ್ಕೆ ಬಂದಿರುವ ಭಕ್ತಾದಿಗಳು ಕುಮಾರಧಾರಾ ನದಿಯ ದಡದಲ್ಲಿ ತೀರ್ಥಸ್ನಾನ ನೆರವೇರಿಸುತ್ತಿದ್ದಾರೆ. ನದಿಯ ದಡದಲ್ಲೇ ತೀರ್ಥಸ್ನಾನ ನೆರವೇರಿಸಲು ಭಕ್ತಾದಿಗಳಿಗೆ ಅವಕಾಶ ನೀಡಲಾಗಿದೆ. ಸ್ನಾನಘಟ್ಟದ ಬಳಿಯಿರುವ ಕಿಂಡಿ ಅಣೆಕಟ್ಟು ಕೂಡ ಸಂಪೂರ್ಣ ಮುಳುಗಡೆಯಾಗಿದೆ.
CKNEWSKANNADA / BRASTACHARDARSHAN CK NEWS KANNADA