ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಎರತೊಡಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಸಹೋದರರು ಶಕ್ತಿಪ್ರದರ್ಶನ ತೋರಿಸಲು ಸಿದ್ಧತೆ ನಡೆಸಿದ್ದಾರೆ. ಮಂಗಳವಾರ 23ರಂದು ಅಪಾರ ಸಂಖ್ಯೆಯಲ್ಲಿ ಗೋಕಾಕದ ಕಿಂಗ್ ಮೇಕರ್ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ತಮ್ಮ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ.
ಗೋಕಾಕ, ಅರಭಾಂವಿ, ಅಥಣಿ, ಬೆಳಗಾವಿ ಗ್ರಾಮೀಣ, ಕಾಗವಾಡ, ಚಿಕ್ಕೋಡಿ, ಖಾನಾಪುರ, ಯಮಕನಮರಡಿ, ಬೈಲಹೊಂಗಲ, ರಾಮದುರ್ಗ ಕ್ಷೇತ್ರ ಸೇರಿ ಎಲ್ಲ ಕಡೆಗಳಿಂದಲೂ ಸಾಹುಕಾರ ಬೆಂಬಲಿಗರು ನಾಮಪತ್ರ ಸಲ್ಲಿಸಲು ಬರಲಿದ್ದು, ಸುಮಾರು 5 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಸದಸ್ಯರು ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಜಿಲ್ಲೆಯಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ವಾಹನಗಳು ಬರಲಿವೆ. ಗ್ರಾಮ ಪಂಚಾಯತ್, ಪುರಸಭೆ, ನಗರಸಭೆ ಸದಸ್ಯರು ಆಗಮಿಸಲಿದ್ದಾರೆ.
ವಿಧಾನ ಪರಿಷತ್ ಚುನಾವಣೆ ರಂಗೇರಿದ್ದು, ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಸಲು ಜನಸಾಗರವೇ ಹರಿದು ಬರಲಿದೆ. ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ಲಖನ್ ಅವರದ್ದಾಗಿದೆ.