ಬೆಂಗಳೂರು : ರಾಜ್ಯ ಚುನಾವಣಾ ಆಯೋಗವು (Karnataka Election Commission) ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ (58 Urban Local Body election) ಘೋಷಣೆ ಮಾಡಿದ್ದು, ಡಿಸೆಂಬರ್ 27 ರಂದು ಮತದಾನ ನಡೆಯಲಿದೆ.
ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದ್ದು, 4 ನಗರಸಭೆ, 19 ಪುರಸಭೆ, 34 ಪಟ್ಟಣ ಪಂಚಾಯಿತಿಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ.
ಡಿಸೆಂಬರ್ 8 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಡಿಸೆಂಬರ್ 15 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಡಿಸೆಂಬರ್ 27 ರಂದು ಮತದಾನ ನಡೆಯಲಿದೆ. ಡಿಸೆಂಬರ್ 30 ರಂದು ಫಲಿತಾಂಶ ಪ್ರಕಟವಾಗಲಿದ್ದು, ಚುನಾವಣೆ ಹಿನ್ನೆಲೆ ಡಿಸೆಂಬರ್ 8 ರಿಂದ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.