ಬೆಂಗಳೂರು: ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜೂನ್ 21 ರವರೆಗೆ ಲಾಕ್ಡೌನ್ ಮುಂದುವರೆಯಲಿದೆ. ಈ ಜಿಲ್ಲೆಗಳಲ್ಲಿ ಈಗ ಅನುಷ್ಠಾನದಲ್ಲಿರುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಜೂನ್ 14ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಪ್ರತಿದಿನ ರಾತ್ರಿ 7ರಿಂದ ಬೆಳಿಗ್ಗೆ 5ರವರೆಗೆ ಕೊವಿಡ್ ಕರ್ಪ್ಯೂ ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಕೆಎಸ್ಆರ್ಟಿಸಿ, ಬಿಎಂಟಿಸಿ ಸಂಚಾರಕ್ಕೆ ಅವಕಾಶವಿಲ್ಲ. ನಿರ್ಮಾಣ ಚಟುವಟಿಕೆ ಆರಂಭಿಸಲು ಅನುಮತಿ. ಸಿಮೆಂಟ್, ಸ್ಟೀಲ್ ಅಂಗಡಿ ತೆಗೆಯಲು ಅವಕಾಶವಿದೆ.
ಎಲ್ಲ ಕಾರ್ಖಾನೆ ಶೇ 50 ಸಿಬ್ಬಂದಿ ಹಾಜರಿಯೊಂದಿಗೆ ಕಾರ್ಯನಿರ್ವಹಣೇಗೆ ಅವಕಾಶ. ಗಾರ್ಮೆಂಟ್ಸ್ ಶೇ 30 ಹಾಜರಿಯೊಂದಿಗೆ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಮದ್ಯ ಪಾರ್ಸೆಲ್ ಪಡೆಯಲು ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗುವುದು. ಬಾರ್ ಮತ್ತು ರೆಸ್ಟೋರೆಂಟ್, ವೈನ್ ಸ್ಟೋರ್, ಎಂಎಸ್ಐಎಲ್ಗಳಲ್ಲಿ ಮಧ್ಯಾಹ್ನ 2ರವರೆಗೆ ಪಾರ್ಸೆಲ್ ಅವಕಾಶವಿದೆ ಎಂದು ಅವರು ತಿಳಿಸಿದರು.
ಶುಕ್ರವಾರ ಸಂಜೆ ಏಳರಿಂದ ಸೋಮವಾರ ಬೆಳಗ್ಗೆ ಆರರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಅಲ್ಲದೇ ನೈಟ್ ಕರ್ಫ್ಯೂ ಸಹ ಜಾರಿಯಲ್ಲಿರಲಿದೆ ಎಂದು ಅವರು ತಿಳಿಸಿದರು.
ಬೆಳಗ್ಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದ ಎಂಟು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕೊವಿಡ್ ಲಾಕ್ಡೌನ್ ವಿನಾಯಿತಿ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವ ಸಂಪುಟದ ಸಹೋದ್ಯೋಗಿಗಳ ಜತೆ ಚರ್ಚೆ ನಡೆಸಿದರು. ಈ ಜಿಲ್ಲೆಗಳಲ್ಲಿ ಅಗತ್ಯ ವಸ್ತು ಖರೀದಿ ಸಮಯ ಹೆಚ್ಚಳ, ಕೈಗಾರಿಕೆಗೆ ವಿನಾಯಿತಿ ನೀಡುವುದು, ಶೇಕಡಾ 50ರಷ್ಟು ಸಿಬ್ಬಂದಿ ಕರ್ತವ್ಯ ನಿರ್ವಹಣೆಗೆ ಅವಕಾಶ, ಸೀಮಿತ ಅವಧಿಗೆ ಪಾರ್ಕ್ ಓಪನ್, ಬಸ್ ಸಂಚಾರ ಹಾಗೂ ಖಾಸಗಿ ವಾಹನ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆಸಲಾಯಿತು. ಕಟ್ಟಡ ನಿರ್ಮಾಣ, ಕೃಷಿ ಕ್ಷೇತ್ರದಲ್ಲಿ ಪೂರ್ತಿ ಅವಕಾಶ ಸಾಧ್ಯತೆ ನೀಡುವ ಸಾಧ್ಯತೆ ವ್ಯಕ್ತವಾಗಿತ್ತು. ಹೆಚ್ಚು ಜನ ಸಂದಣಿಗೆ ಕಾರಣವಾಗುವ ಕ್ಷೇತ್ರಗಳಿಗೆ ವಿನಾಯಿತಿ ನೀಡುವುದು ಅನುಮಾನ ಈ ಮುನ್ನವೇ ವ್ಯಕ್ತವಾಗಿತ್ತು.
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗದ ಹಿನ್ನೆಲೆಯಲ್ಲಿ ಮತ್ತೊಂದು ವಾರ ಲಾಕ್ ಡೌನ್ ಮುಂದುವರೆಸಲು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.ಮೈಸೂರು, ಶಿವಮೊಗ್ಗ, ತುಮಕೂರು, ಹಾಸನ, ಮಂಡ್ಯ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯದ 8 ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣದಲ್ಲಿ ಇಳಿಕೆಯಾಗುತ್ತಿಲ್ಲ. ಹೀಗಾಗಿ ಈ ಜಿಲ್ಲೆಗಳಲ್ಲಿ ಜೂನ್ 14 ರ ಬಳಿಕ ಒಂದು ವಾರ ಲಾಕ್ ಡೌನ್ ಮುಂದುವರೆಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ.ಬೆಳಗಾವಿ- ಕೋವೀಡ್ ಸೊಂಕಿತರ ವಿಚಾರದಲ್ಲಿ ಪಾಸಿಟಿವಿಟಿ ರೇಟ್ ಅತೀ ಹೆಚ್ಚು ಇರುವ,ಬೆಳಗಾವಿ ಸೇರಿದಂತೆ,ರಾಜ್ಯದ ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳಲ್ಲಿ ಜೂನ್ 21 ರವರೆಗೆ ಲಾಕ್ಡೌನ್ ಮುಂದುವರೆಸುವ ನಿರ್ಧಾರ ಕೈಗೊಂಡಿದೆ.
ಬೆಳಗಾವಿ ಜಿಲ್ಲೆಯಲ್ಲಿ ಜೂನ್ 21 ರವರೆಗೆ ಲಾಕ್ಡೌನ್ ಮುಂದುವರೆಯಲ್ಲಿದ್ದು ಹಳೆಯ ಮಾರ್ಗಸೂಚಿಗಳೇ ಅನ್ವಯವಾಗಲಿವೆ.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವೀಂದ್ ಕಾರಜೋಳ ಅವರು ಇವತ್ತು ಗುರುವಾರ ಬೆಳಿಗ್ಗೆ ನಡೆದ ಸಿಎಂ ವಿಡಿಯೋ ಕಾನ್ಫರೆನ್ಸ್ ನಲ್ಲಿ ,ಬೆಳಗಾವಿಯಲ್ಲಿ ಇನ್ನೊಂದು ವಾರ,ಅಂದ್ರೆ ಜೂನ್ 21 ರವರೆಗೆ ಲಾಕ್ಡೌನ್ ಮುಂದುವರೆಸುವಂತೆ ಸಿಎಂ ಗೆ ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಸರ್ಕಾರ ಬೆಳಗಾವಿ ಜಿಲ್ಲೆಯಲ್ಲಿ ಲಾಕ್ಡೌನ್ ಮುಂದುವರೆಸುವ ನಿರ್ಧಾರ ಕೈಗೊಂಡಿದೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಸಂಜೆ,ಗೃಹ ಕಚೇರಿ ಕೃಷ್ಣಾದಲ್ಲಿ ತಜ್ಞರ,ಮತ್ತು ಅಧಿಕಾರಿಗಳ ಜೊತೆ ಸಮಾಲೇಚನೆ ಮಾಡಿ,ಪಂಚ ಸಚಿವರ ಅಭಿಪ್ರಾಯ ಪಡೆದ ಬಳಿಕ,ಬೆಳಗಾವಿ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಇನ್ನೊಂದು ವಾರ ಲಾಕ್ಡೌನ್ ಮುಂದುವರೆಯಲಿದೆ.