ಗೋಕಾಕ : ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ವತಿಯಿಂದ ಇಂದು ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಿತು.
ಯಾರಿಗಾದರು ಸರ್ಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸದಲ್ಲಿ ವಿಳಂಬವಾಗಿದ್ದರೆ ಅಥವಾ ಅಧಿಕಾರಿಗಳು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುತ್ತಿದ್ದರೆ ಅಥವಾ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳಿದ್ದಲ್ಲಿ ಈ ಸಭೆಯಲ್ಲಿ ಭಾಗವಹಿಸಿ ಸಾರ್ವಜನಿಕರು ಉಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಎಲ್ಲ ಇಲಾಖೆಯ ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳೊಂದಿಗೆ ಕೆಲಸ ನೆರವೇರಿಸಿಕೊಳ್ಳಲು ಅಥವಾ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ 1 ಮತ್ತು 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿತ್ತು.
ಎಲ್ಲ ಸರ್ಕಾರಿ ಕಛೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಸಂಪರ್ಕ ನಂಬರ್ ಫಲಕ ಅಳವಡಿಸಬೇಕು ಎಂದು ತಿಳಿಸಿದರು.
ಬೆಳಗಾವಿ ಲೋಕಾಯುಕ್ತ ಡಿವಾಯ್ಎಸ್ಪಿ ರಘು ಹಾಗೂ ಡಿವಾಯ್ಎಸ್ಪಿ ಭರತ ರೆಡ್ಡಿ ಹಾಗೂ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.