ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಮಂಗಳವಾರ ನಾಮಪತ್ರ ಸಲ್ಲಿಸಿದರು.
ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಬಿಜೆಪಿ ಶಾಲು ಹಾಕಿಕೊಂಡು ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿದ ಮಂಗಲಾ ನಾಮನಿರ್ದೇಶನ ಮಾಡಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವ ಉಮೇಶ್ ಕತ್ತಿ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಂಕರಗೌಡ ಪಾಟೀಲ, ಶಾಸಕರಾದ ಅಭಯ ಪಾಟೀಲ ಹಾಗೂ ಅನಿಲ ಬೆನಕೆ ಜೊತೆಗಿದ್ದರು.
ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ನಾಮಪತ್ರ ಸ್ವೀಕರಿಸಿದರು.