Breaking News

ವೈದ್ಯಾಧಿಕಾರಿ ನಾಗೇಂದ್ರ ಆತ್ಮಹತ್ಯೆ ಪ್ರಕರಣ ; ಜಿ.ಪಂ. ಸಿಇಒ ಪ್ರಶಾಂತ್ ಮಿಶ್ರಾ ವರ್ಗಾವಣೆ: ಜಿಲ್ಲಾಧಿಕಾರಿಗೆ ಹೆಚ್ಚುವರಿ ಹೊಣೆ


ಮೈಸೂರು: ನಂಜನಗೂಡು ತಾಲೂಕು ವೈದ್ಯಾಧಿಕಾರಿ ಡಾ. ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದ ಜಿಲ್ಲಾ ಪಂಚಾಯತ್‌ ಸಿಇಒ ಪ್ರಶಾಂತ್‌ ಕುಮಾರ್‌ ಮಿಶ್ರಾ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸದ್ಯಕ್ಕೆ, ಮೈಸೂರು ಜಿಲ್ಲಾಧಿಕಾರಿಯಾದ ಅಭಿರಾಮ್‌ ಜಿ ಶಂಕರ್‌ ಅವರಿಗೆ ಹೆಚ್ಚಿನ ಹೊಣೆಯನ್ನು ನೀಡಲಾಗಿದ್ದು ಜಿಲ್ಲಾ ಪಂಚಾಯತ್‌ ಸಿಇಒ ಆಗಿ ನೇಮಿಸಲಾಗಿದೆ.

ಡಾ. ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬರುತ್ತದ್ದಂತೆಯೇ, ಪ್ರಶಾಂತ್‌ ಕುಮಾರ್‌ ವಿರುದ್ದ ಪ್ರತಿಭಟನೆಗಳು ನಡೆದಿದ್ದವು. ಜಿಲ್ಲಾಧಿಕಾರಿ ಕಚೇರಿ ಎದುರು ನಾಗೇಂದ್ರ ಅವರ ಶವವನ್ನು ಇಟ್ಟು ಪ್ರತಿಭಟನೆಯನ್ನು ನಡೆಸಲಾಗಿತ್ತು.


ಅಲ್ಲದೇ ಸಿಇಒ ಅಮಾನತ್ತುಗೊಳಿಸದೇ ಇದ್ದರೇ ಆಗಸ್ಟ್ 24ರಿಂದ ರಾಜ್ಯಾಧ್ಯಂತ ಕರ್ತವ್ಯಕ್ಕೆ ಗೈರುಹಾಜರಾಗಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು.
ಪ್ರತಿಭಟನೆಗಳು ನಡೆಯುತ್ತಿದ್ದಂತೆಯೇ, ಸ್ಥಳಕ್ಕಾಗಮಿಸಿ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಸುಧಾಕರ್‌ ಅವರ ವಿರುದ್ದ ನಾಗೇಂದ್ರ ಅವರ ಸಹೋದ್ಯೋಗಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಡಾ. ನಾಗೇಂದ್ರ ಅವರಿಗೆ 50 ಲಕ್ಷ ರೂ. ಪರಿಹಾರದ ಜೊತೆಗೆ ಅವರ ಮಡದಿಗೆ ಸರ್ಕಾರಿ ನೌಕರಿ ನೀಡುವ ಭರವಸೆಯನ್ನೂ ಸರ್ಕಾರ ನೀಡಿತ್ತು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಕೆಸರು ಗದ್ದೆಯಂತಿದ್ದ ರಸ್ತೆ ದಾಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು!

ಮೈಸೂರು: ಜುಲೈ 19ರಂದು ರಾಜ್ಯಾದ್ಯಂತ ಎಸ್‌ಎಸ್‌ಎಲ್ ಸಿ ಪರೀಕ್ಷೆಗಳು ಯಶಸ್ವಿಯಾಗಿ ನಡೆದಿವೆ. ಗಣಿತ, ಸಮಾಜ ವಿಜ್ಞಾನ ಮತ್ತು ವಿಜ್ಞಾನ ಪರೀಕ್ಷೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ