ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆಯಾರ್ಭಟ ಜೋರಾಗಿದ್ದು, ದ್ವಾರಕಾ ಸೆಕ್ಟರ್ನಲ್ಲಿ ಕಾರ್ವೊಂದು ದಿಢೀರ್ ಆಗಿ ಕುಸಿದು ಬಿದ್ದಿರುವ ಘಟನೆ ನಡೆಯಿತು.
ದ್ವಾರಕಾ ಸೆಕ್ಟರ್-18ರಲ್ಲಿ ರಸ್ತೆ ಮೇಲೆ ಚಲಿಸುತ್ತಿದ್ದ ವಾಹನವೊಂದು ರಸ್ತೆ ಕುಸಿತದಿಂದ ದಿಢೀರ್ ಆಗಿ ಭೂಮಿಯೊಳಗೆ ಸಿಲುಕಿಕೊಂಡಿತು. ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿ, ಕಾರು ಮೇಲೆತ್ತಲಾಗಿದೆ. ಹೀಗಾಗಿ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಪೊಲೀಸ್ ಕಾನ್ಸ್ಸ್ಟೇಬಲ್ ವಾಹನ ಚಲಾವಣೆ ಮಾಡಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈ ಪ್ರದೇಶದಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.
CKNEWSKANNADA / BRASTACHARDARSHAN CK NEWS KANNADA