ಬೆಂಗಳೂರು: ನಗರದಲ್ಲಿ ಕರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂವನ್ನು ಬಿಗಿಗೊಳಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ನೈಟ್ ಕರ್ಫ್ಯೂ ಈಗ ಜಾರಿಯಲ್ಲಿ ಇದ್ದರೂ ಬೆಂಗಳೂರಿಗರು ಡೋಂಟ್ ಕೇರ್ ಎನ್ನುತ್ತಿರುವ ಹಿನ್ನೆಲೆಯಲ್ಲಿ ಕರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಸಾಗಿದೆ.
ಇದೆ ಕಾರಣಕ್ಕೆ ಕಠಿಣ ನಿಯಮವನ್ನು ರೂಪಿಸಲು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಆದ್ದರಿಂದ ಇಂದು (ಮಂಗಳವಾರ- ಜುಲೈ 3) ರಾತ್ರಿ 10 ಗಂಟೆಯಿಂದ ರಾತ್ರಿ ಕರ್ಫ್ಯೂ ಶುರುವಾಗಲಿದೆ. ಪ್ರತಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಈ ಕರ್ಫ್ಯೂ ಜಾರಿಯಲ್ಲಿ ಇರಲಿದೆ.
ಇಷ್ಟು ದಿನಗಳ ಕಾಲ ನೈಟ್ ಕರ್ಫ್ಯೂ ಇದ್ದರೂ ಸರಿಯಾಗಿ ಪಾಲನೆ ಆಗುತ್ತಿರಲಿಲ್ಲ.
ಆದ್ದರಿಂದ ಅನಗತ್ಯವಾಗಿ ಓಡಾಡಿದರೆ, ರಸ್ತೆಗಿಳಿದರೆ ದಂಡ ಪ್ರಯೋಗ ಮಾಡಲಾಗುತ್ತದೆ. ಜತೆಗೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೇಸ್ ದಾಖಲಿಸುವುದಾಗಿ ಅಧಿಕಾರಿಗಳು ಎಚ್ಚರಿಸಿದ್ದಾರೆ.
ಯಾರಿಗೆ ಯಾವುದಕ್ಕೆ ವಿನಾಯಿತಿ?
* ರೋಗಿಗಳನ್ನ ಕರೆದೊಯ್ಯುವಾಗ ಸಂಬಂಧಪಟ್ಟವರಿಗೆ ಮಾತ್ರ ಅವಕಾಶ
* ಯಾವುದೇ ಕಂಪನಿ ಹಾಗೂ ಕೈಗಾರಿಕಾ ಉದ್ಯೋಗಿಗಳು ಪಾಸ್ ಹೊಂದಿರಬೇಕು
* ಟೆಲಿಕಾಂ ಹಾಗೂ ಇಂಟರ್ನೆಟ್ ಸರ್ವೀಸಸ್ ವರ್ಕರ್ಸ್ ಐಡಿಕಾರ್ಡ್ ಹೊಂದಿರಬೇಕು
* ಮೆಡಿಕಲ್ ಎಮರ್ಜೆನ್ಸಿ ಹಾಗೂ ಅಗತ್ಯ ಸರಬರಾಜುವಾಹನಗಳಿಗೆ ಅವಕಾಶ
* ಅಗತ್ಯ ಸರಕು ಸಾಗಾಟ ವಾಹನಗಳಿಗೆ ಅವಕಾಶ
* ಏರ್ಪೋರ್ಟ್, ರೈಲ್ವೆ ಸೇರಿದಂತೆ ಓಡಾಟಕ್ಕೆ ಸೂಕ್ತ ಮಾಹಿತಿ ಒದಗಿಸಬೇಕು.
CKNEWSKANNADA / BRASTACHARDARSHAN CK NEWS KANNADA