Breaking News

ಕೃಷಿ ಕ್ಷೇತ್ರಕ್ಕೆ ಪ್ರಧಾನಿ ಮೋದಿ ಗಿಫ್ಟ್


 

ನವದೆಹಲಿ, ಆ.9-ಕೃಷಿ ವಲಯದಲ್ಲಿ ನವೋದ್ಯಮಕ್ಕೂ ಉತ್ತೇಜನ ನೀಡುವ ನಿಟ್ಟಿನಲ್ಲಿ ದೇಶದ ವಿವಿಧೆಡೆ 350ಕ್ಕೂ ಹೆಚ್ಚು ಅಗ್ರಿ ಸ್ಟಾರ್ಟ್ ಅಪ್ ಆರಂಭಕ್ಕೆ ಕೇಂದ್ರ ಸರ್ಕಾರ ಹಣಕಾಸು ನೆರವು ನೀಡಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ರೈತರು ಮತ್ತು ಬೆಳೆಗಾರ ಹಿತರಕ್ಷಣೆಗಾಗಿ ಕೃಷಿ ಉತ್ಪಾದಕರ ಸಂಘಟನೆ (ಎಫ್‍ಪಿಒ)ಗಳ ಜಾಲವನ್ನು ಸಹ ಸೃಷ್ಟಿಸಲಾಗುವುದು ಎಂದು ಅವರು ಘೋಷಿಸಿದರು.

ಕೃಷಿ ಮೂಲ ಸೌಕರ್ಯಾಭಿವೃದ್ಧಿ ನಿ ರೈತರಿಗೆ ಒಂದು ಲಕ್ಷ ಕೋಟಿ ರೂ.ಗಳ ಹಣಕಾಸು ನೆರವಿನ ಸೌಲಭ್ಯ ಒದಗಿಸುವ ಮಹತ್ವದ ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು.

 

ಇದೇ ವೇಳೆ, ಪಿಎಂ ಕಿಸಾನ್ (ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿ) ಯೋಜನೆ ಅಡಿ ದೇಶದ 8.5 ಕೋಟಿ ಕೃಷಿಕರಿಗೆ 17,000 ಕೋಟಿ ರೂ.ಗಳ ಅರನೇ ಕಂತಿಯ ನಿಯನ್ನು ಸಹ ಬಿಡುಗಡೆಗೊಳಿಸಿ ಮೋದಿ ರೈತ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು.

ಕೃಷಿ ಮೂಲಸೌಕರ್ಯ ನಿಯಿಂದ ಉದ್ಯೋಗ ಸೃಷ್ಟಿ ಜೊತೆಗೆ ಗ್ರಾಮಗಳಲ್ಲಿ ಸುಧಾರಿತ ಗೋದಾಮುಗಳು ಮತ್ತು ಆಧುನಿಕ ಶೈತ್ಯಾಗಾರಗಳನ್ನು ಸ್ಥಾಪಿಸಲು ನೆರವಾಗಲಿದೆ ಎಂದು ಅವರು ಹೇಳಿದರು.

ಆಧುನಿಕ ತಂತ್ರಜ್ಞಾನದಿಂದ ಕೃಷಿ ಉತ್ಪಾದನೆಯಲ್ಲಿ ಸಮಸ್ಯೆಯಾಗುತ್ತಿಲ್ಲ. ಆದರೆ ಕೊಯ್ಲು ನಂತರದ ನಷ್ಟವಾಗುತ್ತಿರುವುದು ಸಮಸ್ಯೆಗೆ ಕಾರಣವಾಗಿದೆ ಇದನ್ನು ನಿಭಾಯಿಸಲು ರೈತರಿಗೆ ಕೇಂದ್ರ ಸರ್ಕಾರ ಅಗತ್ಯವಾದ ಎಲ್ಲ ನೆರವು ನೀಡುತ್ತಿದೆ ಎಂದು ಮೋದಿ ತಿಳಿಸಿದರು.

 

ರೈತರು ತಮ್ಮ ಉತ್ಪನ್ನಗಳು ಮತ್ತು ಬೆಳೆಗಳ ಮಾರಾಟ ವಿಳಂಬ ಮತ್ತು ನಷ್ಟವನ್ನು ತಪ್ಪಿಸಲು ಕೇಂದ್ರ ಸರ್ಕಾರ ಇತ್ತೀಚೆಗೆ ಕಿಸಾಸ್ ರೈಲುಗಳನ್ನು ಆರಂಭಿಸಿದೆ ಎಂದು ಪ್ರಧಾನಿ ತಿಳಿಸಿದರು.

ಕೊರೊನಾ ವೈರಸ್ ಪಿಡುಗಿನ ವೇಳೆ ದೇಶದಲ್ಲಿ ಆಹಾರ ಪೂರೈಕೆಯನ್ನು ಸುಗಮಗೊಳಿಸಲು ರೈತರು ಮತ್ತು ಬೆಳೆಗಾರರು ದೊಡ್ಡ ಮಟ್ಟದಲ್ಲಿ ನೆರವಾಗಿದ್ದಾರೆ ಎಂದು ಮೋದಿ ಕೃಷಿಕ ಸಮುದಾಯವನ್ನು ಪ್ರಶಂಸಿಸಿದರು.

ರೈತರು ಕೋವಿಡ್19 ಪಿಡುಗಿನ ಸಂದರ್ಭದಲ್ಲಿ ಆರೋಗ್ಯದ ಕಡೆ ನಿಗಾ ವಹಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಪ್ರಧಾನಿ ಸಲಹೆ ಮಾಡಿದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ದಾಸೋಹ ರತ್ನ ಚಕ್ರವರ್ತಿ ಶ್ರೀ ದಾನೇಶ್ವರ ಶ್ರೀಗಳಿಗೆ “ರಾಷ್ಟ್ರೀಯ ಧರ್ಮಾಚಾರ್ಯ” ಪ್ರಶಸ್ತಿ ಪ್ರಧಾನ!

ನವ ದೆಹಲಿ : ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಸ್ಕಿಲ್ ಬುಕ್ ಲೋಕಾರ್ಪಣೆ ಹಾಗೂ ಜ್ಞಾನ-ವಿಜ್ಞಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ