ಗೋಕಾಕ : ನಗರದ ಎನ್.ಎಸ್.ಎಫ್ ವಸತಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಎನ್.ಎಸ್.ಎಫ್ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಎನ್.ಎಸ್.ಎಫ್ ವಸತಿ ನಿಲಯಗಳ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭ ಹಮ್ಮಿಕೊಂಡಿದ್ದರು.
ಈ ಕಾರ್ಯಕ್ರಮವನ್ನು ಸಂಸ್ಥೆಯ ಟ್ರಸ್ಟಿಗಳಾದ ವಿ ಆರ್ ಪರಸನ್ನವರ ಅವರು ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಣ ಮೌಲ್ಯಯುತ ಜೀವನ ಕಲಿಸುತ್ತದೆ ಪ್ರಸ್ತುತ ಸ್ಪರ್ಧಾತ್ಮಕ ಯುಗವಾಗಿರುವ ಕಾರಣ ಪಾಲಕರು ತಮ್ಮ ಮಕ್ಕಳ ಕಲಿಕೆಗೆ ಒತ್ತು ನೀಡಬೇಕು ಇದು ಮಕ್ಕಳ ಕಲಿಕೆಯ ಹಂಬಲ ಹೆಚ್ಚಿಸುತ್ತದೆ ಎಂದರು.
SSLC ವಿದ್ಯಾರ್ಥಿಗಳು ಚೆನ್ನಾಗಿ ಓದಿ ಪರೀಕ್ಷೆಯಲ್ಲಿ ಸಾಧನೆ ಮಾಡಿ ಸಂಸ್ಥೆಯ ಹಾಗೂ ನಿಮ್ಮ ಕುಟುಂಬದ ಕೀರ್ತಿ ಹೆಚ್ಚಿಸಬೇಕು ಎಂದ ತಿಳಿಸಿದರು.
ನಂತರ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿಯವರಾದ ಮಹೇಶ್ ಚಿಕ್ಕೋಡಿ, ಪ್ರಾಂಶುಪಾಲರಾದ ಪ್ರಕಾಶ್ ಲಗಶೇಟ್ಟಿ, ಮುಖ್ಯೋಪಾಧ್ಯಾಯರಾದ ಕೋಳಿ ಸರ್ ಹಾಗೂ ಅನೇಕ ಮುಖಂಡರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು