ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ಮೈಲಿಗಲ್ಲು ನಿರ್ಮಿಸಿದ್ದಾರೆ. ಸುದೀರ್ಘ ಅವಧಿ ಪೂರೈಸಿದ ಕಾಂಗ್ರೇಸೇತರ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಪಾತ್ರರಾಗಿದ್ದಾರೆ.
ಇದೀಗ ಮಾಜಿ ಪ್ರಧಾನಿ, ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ದಾಖಲೆ ಮುರಿದಿದ್ದಾರೆ. ಇಷ್ಟೇ ಅಲ್ಲ ಸುದೀರ್ಘ ಅವಧಿಗೆ ಪ್ರಧಾನಿಯಾದ ಭಾರತದ ನಾಲ್ಕನೇ ಪ್ರಧಾನಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಬಿಜೆಪಿಯಿಂದ ಪ್ರಧಾನಿ ಪಟ್ಟ ಅಲಂಕರಿಸಿದ ಅಟಲ್ ಬಿಹಾರಿ ವಾಜಪೇಯಿ 2,268 ದಿನ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಇದೀಗ ಮೋದಿ ಈ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ಬಿಜೆಪಿಯಿಂದ ಅತೀ ಹೆಚ್ಚು ದಿನ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮೊದಲಿಗ ಎಂಬ ದಾಖಲೆ ಬರೆದಿದ್ದಾರೆ.
CKNEWSKANNADA / BRASTACHARDARSHAN CK NEWS KANNADA