ಬೆಳಗಾವಿ : ಕರ್ನಾಟಕ ರಾಜ್ಯೋತ್ಸವದಂದು ಅದ್ಧೂರಿ ಆಚರಣೆಗೆ ಅವಕಾಶ ನೀಡಬೇಕು’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ, ಉತ್ತರ ಕರ್ನಾಟಕ ಯುವ ಘಟಕ ಅಧ್ಯಕ್ಷ ಪವನ ಹು ಮಹಾಲಿಂಗಪುರ ಅವರು ಆಗ್ರಹಿಸಿದ್ದಾರೆ.
ಎಲ್ಲ ಚಟುವಟಿಕೆಗಳಿಗೂ ಅವಕಾಶ ಕೊಡಲಾಗಿದೆ. ಚುನಾವಣೆಗಳನ್ನೂ ನಡೆಸಲಾಗುತ್ತಿದೆ. ಆದರೆ, ರಾಜ್ಯೋತ್ಸವ ಮೆರವಣಿಗೆಗೆ ಅವಕಾಶ ಇಲ್ಲ ಎಂದು ಸರಕಾರ ಹೇಳುತ್ತಿರುವುದು ಸಮಂಜಸವಲ್ಲ.ಗಡಿನಾಡಿನಲ್ಲಿ ಕನ್ನಡಿಗರ ಸ್ವಾಭಿಮಾನದ ಹಬ್ಬವನ್ನು ವಿಜೃಂಭಣೆಯಿಂದ ನಡೆಸಲು ಅನುವು ಮಾಡಿಕೊಡಬೇಕು.
ಚುನಾವಣೆ ಪ್ರಚಾರದಲ್ಲಿ ರಾಜಕೀಯ ಪಕ್ಷಗಳು ಬೃಹತ್ ಸಮಾವೇಶಗಳನ್ನು ನಡೆಸುತ್ತಿವೆ. ಅಲ್ಲಿಗೆ ಇಲ್ಲದ ಕೋವಿಡ್ ನೆಪವನ್ನು ರಾಜ್ಯೋತ್ಸವಕ್ಕೆ ಹೇಳುತ್ತಿರುವುದು ಖಂಡನೀಯ,
ಗಡಿ ನಾಡಿನ ಅಸ್ಮಿತೆಯಾದ ರಾಜ್ಯೋತ್ಸವದಲ್ಲಿ ಮೆರವಣಿಗೆ ನಡೆಸುವುದಕ್ಕೆ ಕೋವಿಡ್ ನೆಪವನ್ನು ಸರಕಾರ ಹೇಳುತ್ತಿರುವುದು ಸರಿಯಲ್ಲ.
‘ಹಿಂದಿನ ಎರಡು ವರ್ಷಗಳು ಕೋವಿಡ್ ಕಾರಣದಿಂದ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡಲಿಲ್ಲ. ಈಗ ಕೋವಿಡ್ ಪ್ರಕರಣಗಳು ಇಳಿಕೆಯಾಗಿವೆ. ಎಲ್ಲ ಧಾರ್ಮಿಕ ಆಚರಣೆ, ಶಾಲಾ-ಕಾಲೇಜುಗಳು, ಚಿತ್ರಮಂದಿರಗಳಿಗೆ ಅವಕಾಶ ನೀಡಿದೆ. ಅದೇ ರೀತಿ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಅನುವು ಮಾಡಿಕೊಡಬೇಕು. ಎಂದು ಪವನ ಮಹಾಲಿಂಗಪುರ ಅವರು ಪ್ರಕಟಣೆಯಲ್ಲಿ ತಿಳಿಸಿದರು.