ಗೋಕಾಕ : ಗೋಕಾಕ್ ಇನ್ಸ್‌ಪೆಕ್ಟರ್ ಗೋಪಾಲ್ ರಾಠೋಡ್ ಹಾಗೂ ಸಿಬ್ಬಂದಿ ವಿರುದ್ಧ ಬೆಳಗಾವಿ ಜಿಲ್ಲೆ ಗೋಕಾಕ್‌ನ ಸಿದ್ದಪ್ಪ ಬಬಲಿ ಕುಟುಂಬ ಗಂಭೀರ ಆರೋಪ ಮಾಡಿದೆ. ನ್ಯಾಯಕ್ಕಾಗಿ ಆಗ್ರಹಿಸಿ ವೃದ್ಧ ದಂಪತಿ, ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ.
ಇನ್ನು ಮತ್ತೊಂದೆಡೆ ಈ ಘಟನೆ ಸಂಬಂಧ ಕುಟುಂಬಸ್ಥರು ಸಿಎಂ ಬೊಮ್ಮಾಯಿ, ಗೃಹಸಚಿವರಿಗೂ ಪತ್ರ ಬರೆದು ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ಗೋಕಾಕ್ ಇನ್ಸ್‌ಪೆಕ್ಟರ್, ಸಿಬ್ಬಂದಿ ವಿರುದ್ಧ ಲೋಕಾಯುಕ್ತ, ಮಹಿಳಾ ಆಯೋಗಕ್ಕೂ ದೂರು ನೀಡಿದ್ದಾರೆ. 2021ರ ಜುಲೈ 17ರಂದು ಗೋಕಾಕ್‌ನ ಮಹಾಂತೇಶ ನಗರ ಬಡಾವಣೆಯಲ್ಲಿ ಮಂಜುನಾಥ ಮುರಕಿಭಾವಿ ಎಂಬುವವರ ಕೊಲೆಯಾಗಿತ್ತು. ಕೊಲೆ ಪ್ರಕರಣದಲ್ಲಿ ಸಿದ್ದಪ್ಪ ಬಬಲಿ ಮಕ್ಕಳಾದ ಕೃಷ್ಣ, ಅರ್ಜುನ್ ಬಂಧನವಾಗಿತ್ತು.
ಕೊಲೆ ಕೇಸ್‌ನಲ್ಲಿ ಅಮಾಯಕರ ಬಂಧಿಸಿ 15 ಲಕ್ಷ ಹಣ ಪಡೆದು ಕಿರುಕುಳ ಆರೋಪ ಗೋಕಾಕ್ ಸಿಪಿಐ ವಿರುದ್ಧ ದಬ್ಬಾಳಿಕೆ ಎಂದು ಆರೋಪ ಬಂದಿದೆ.
ಈ ಪ್ರಕರಣವನ್ನು ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಗೆ ಎಎಸ್‌ಪಿ ಮಹಾನಿಂಗ ನಂದಗಾವಿ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಪೊಲೀಸರ ವಿರುದ್ಧ ಆರೋಪ ಮಾಡಿದ್ದ ಬಬಲಿ ಕುಟುಂಬಸ್ಥರಿಂದಲೂ ಮಾಹಿತಿ ಸಂಗ್ರಹ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಎಎಸ್‌ಪಿ ಮಹಾನಿಂಗ ನಂದಗಾವಿ ಮಾತನಾಡಿ ತನಿಖೆ ಆರಂಭವಾಗಿದ್ದು, ಹಂತ ಹಂತವಾಗಿ ಪ್ರಕರಣವನ್ನು ಪರಿಶೀಲನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.