ಗೋಕಾಕ : ಗ್ರಾಮೀಣ ಪೊಲೀಸ್ ಠಾಣಾ ಸರಹದ್ದಿನ ಕೊಣ್ಣೂರು ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟವಾಡುತ್ತಿದ್ದ 12 ಜನರನ್ನು ವಶಕ್ಕೆ ಪಡೆಯುವಲ್ಲಿ ಜಿಲ್ಲಾ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.ಗೋಕಾಕ್ ಗ್ರಾಮೀಣ ಠಾಣಾ ವ್ಯಾಪ್ತಿಯ ಕೊಣ್ಣೂರು ಗ್ರಾಮದಲ್ಲಿ ಸಾರ್ವಜನಿಕವಾಗಿ ಇಸ್ಪೀಟ್ ಅಂದರ್ ಬಾಹರ್ ಜೂಜಾಟವಾಡುತ್ತಿದ್ದ 12 ಜನರನ್ನು ವಶಕ್ಕೆ ಪಡೆಯುವಲ್ಲಿ ಬೆಳಗಾವಿಯ ಅಪರಾಧ ವಿಭಾಗ ಪೊಲೀಸ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಜಿಲ್ಲಾ ಸಿಇಎನ್ ಅಪರಾಧ ಠಾಣೆಯ ಪೊಲೀಸ್ ನಿರೀಕ್ಷಕ ವೀರೇಶ್ ದೊಡಮನಿ, ಪಿಎಸ್‌ಐ ನಾಗನಗೌಡ ಕಟ್ಟೀಮನಿಗೌಡ್ರ, ಡಿಸಿಆರ್‌ಬಿ ಪಿಎಸ್‌ಐ ಬಸಗೌಡ ಪಾಟೀಲ್, ಸಿಇಎನ್ ಎಎಸ್‌ಐ ಎ.ಎಚ್ ಭಜಂತ್ರಿ, ಸಿಬ್ಬಂದಿಗಳಾದ ಎ.ಆರ್.ಮಾಳಗಿ, ಬಿಎಸ್ ಚಿನ್ನಿಕುಪ್ಪಿ, ಎನ್.ಆರ್.ಘಡೆಪ್ಪನವರ್, ಜಿಎಸ್ ಲಮಾಣಿ, ಎಸ್.ಐ ಭಂಡಿ, ಗೋಕಾಕ್ ಗ್ರಾಮೀಣ ಠಾಣಾ ಸಿಬ್ಬಂದಿಯೊಂದಿಗೆ ದಾಳಿ ಮಾಡಿ 12 ಜನರನ್ನು ವಶಕ್ಕೆ ಪಡೆದು ಬಂಧಿತರಿಂದ 1ಲಕ್ಷ 85 ಸಾವಿರ ರೂ ನಗದು, 11 ಮೊಬೈಲ್ ಫೋನ್, 8 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತಂತೆ ಗೋಕಾಕ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅಪರಾಧ ವಿಭಾಗ ಪೊಲೀಸರು ಹಾಗೂ ಗೋಕಾಕ್ ಗ್ರಾಮೀಣ ಠಾಣಾ ಪೊಲೀಸರ ಈ ಕಾರ್ಯವನ್ನು ಎಸ್‌ಪಿ ಡಾ. ಸಂಜೀವ್ ಪಾಟೀಲ್ ಶ್ಲಾಘಿಸಿದ್ದಾರೆ.
Check Also
*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …