ಬೆಳಗಾವಿ : ಪತ್ರಿಕೆಗಳು ಮಾನವ ಜೀವನದ ಅವಿಭಾಜ್ಯ ಅಂಗವಾಗಿವೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು
ಮಂಗಳವಾರದಂದು ನಗರದ ಜೀರಗೆ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಬೆಳಗಾವಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಹಾಗೂ ಗುರುವಂದನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸ್ತುತ ವಿದ್ಯಾಮಾನಗಳನ್ನು ವಿವರಿಸಲು ಪತ್ರಿಕೆಗಳ ಪಾತ್ರ ಬಹುಮುಖ್ಯ. ದೇಶದಲ್ಲಿ ಮತ್ತು ರಾಜ್ಯದಲ್ಲಿ ಪತ್ರಿಕೆಗಳು ಸಮಾಜದಲ್ಲಿ ಬದಲಾವಣೆ ಮಾಡಲು ಸಾಕಷ್ಟು ಪ್ರಯತ್ನ ಮಾಡುತ್ತಿವೆ. ಸಾಕಷ್ಟು ಜನರು ಅದನ್ನು ಅವಲಂಬಿಸಿದ್ದಾರೆ.
ಸಂವಿಧಾನದ ನಾಲ್ಕನೇ ಅಂಗ ಮಾಧ್ಯಮ ಅದು ಶಾಸಕಾಂಗ, ನ್ಯಾಯಾಂಗ ಮತ್ತು ಕಾರ್ಯಾಂಗದ ಕಿವಿಹಿಂಡಿ ಸರಿಯಾದ ದಾರಿಯಲ್ಲಿ ನಡೆಯಲು ಸಹಕಾರಿಯಾಗಿದೆ . ವಿಶ್ವದ ಹಲವಾರು ರಾಷ್ಟ್ರಗಳಲ್ಲಿ ವಾಕ್ ಸ್ವಾತಂತ್ರ್ಯ ಇಲ್ಲಾ ಆದರೆ ನಮ್ಮ ದೇಶದಲ್ಲಿ ವಾಕ್ಯ ಸ್ವಾತಂತ್ರ್ಯದ ಜೊತೆಗೆ ಪತ್ರಿಕಾ ಸ್ವಾತಂತ್ರ್ಯ ಇದೆ. ಇಂದು ಸಾಮಾಜಿಕ ಜಾಲತಾಣವೂ ಪರಿಣಾಮವಾಗಿಯಾಗಿ ಕಾರ್ಯನಿರ್ವಹಿಸಿ ರಾಷ್ಟ್ರದ ಕೊನೆಯ ಪ್ರಜೆಗೆ ಸುದ್ದಿ ಮುಟ್ಟಿಸುವ ಕಾರ್ಯ ಮಾಧ್ಯಮ ಮಾಡುತ್ತಿದೆ ಆ ನಿಟ್ಟಿನಲ್ಲಿ ನಾವೆಲ್ಲರೂ ಇಂದು ಪತ್ರಿಕೆಗಳನ್ನು ಬೆಳೆಸುವ ಕಾರ್ಯ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ್, ಪೊಲೀಸ್ ಕಮಿಷನರ್ ಡಾ.ಬೋರಲಿಂಗ್ಯಯ, ಗುರುನಾಥ್ ಕಡಬೂರ, ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ , ಪುಂಡಲೀಕ ಬಾಳೋಜಿ, ಜಿಲ್ಲಾಧ್ಯಕ್ಷ ದಿಲೀಪ್ ಕುರಂದವಾಡೆ , ಶಿಕ್ಷಣಾಧಿಕಾರಿ ರವಿ ಭಜಂತ್ರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು .