ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ( PSI Recruitment Scam ) ಅಕ್ರಮ ನೆಡೆದಿರೋ ಬಗ್ಗೆ ದಿನಕ್ಕೊಂದು ಟ್ವಿಸ್ಟ್ ಸಿಕ್ಕ ಹಿನ್ನಲೆಯಲ್ಲಿ, ಇದೀಗ ರಾಜ್ಯ ಸರ್ಕಾರದಿಂದ ಪಿಎಸ್ಐ ನೇಮಕಾತಿಯನ್ನೇ ರದ್ದು ಮಾಡಲಾಗಿದೆ.ಜೊತೆಗೆ ಮರು ಪರೀಕ್ಷೆಗೆ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Jnanendra ) ಮಾಹಿತಿ ನೀಡಿದ್ದು, ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರೋದು ಸಾಭೀತಾಗಿದೆ. ಬೆಂಗಳೂರು ಸೆಂಟರ್, ಕಲಬುರ್ಗಿ ಸೇರಿದಂತೆ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ನಡೆದಿದೆ. ಈ ಹಿನ್ನಲೆಯಲ್ಲಿ ಪಿಎಸ್ಐ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಸರ್ಕಾರ ಮರು ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
54289 ಮಂದಿ ಪರೀಕ್ಷೆಗಾಗಿ ಕುಳಿತಿದ್ದರು. ಅವರಿಗೆ ಮಾತ್ರ ಇದೀಗ ಮತ್ತೊಂದು ಪರೀಕ್ಷೆ ನಡೆಸಲಾಗುತ್ತಿದೆ. ಒಂದಕ್ಕಿಂತ ಹೆಚ್ಚು ಸೆಂಟರ್ ಗಳಲ್ಲಿ ಪರೀಕ್ಷೆ ಅಕ್ರಮ ನಡೆದ ಕಾರಣ, ರಾಜ್ಯ ಸರ್ಕಾರ ಈ ಹಿಂದಿನ ಪರೀಕ್ಷಾ ನೇಮಕಾತಿಯನ್ನೇ ರದ್ದುಪಡಿಸಲಾಗುತ್ತಿದೆ. ಮತ್ತೆ ಮರು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಅಂದಹಾಗೇ ಇದೀಗ ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದೆ. ಕ್ವೀನ್ ಪಿನ್ ದಿವ್ಯಾ ಕೂಡ ಅರೆಸ್ಟ್ ಮಾಡಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರ 545 ಪಿಎಸ್ಐ ನೇಮಕಾತಿ ಪರೀಕ್ಷೆಯನ್ನೇ ರದ್ದು ಮಾಡಲಾಗಿದ್ದು, ಈಗ ಮತ್ತೊಮ್ಮೆ ಪರೀಕ್ಷೆ ನಡೆಸೋ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.