ಗೋಕಾಕ: ಕೊರೋನಾ ಚೈನ್ ಬ್ರೇಕ್ ಮಾಡಲು ಜಿಲ್ಲಾಡಳಿತ ವಾರದ ಕೊನೆಯ ಮೂರು ದಿನ ಶುಕ್ರವಾರದಿಂದ ಸೋಮವಾರ ಮುಂಜಾನೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದು, ಇಂತಹ ಸಂದರ್ಭದಲ್ಲಿ ಯಾರು ಕೂಡಾ ಮನೆಯಿಂದ ಹೊರಗಡೆ ಬಾರದೆ ಸಹಕರಿಸುವಂತೆ ನಗರ ಠಾಣೆ ಪಿಎಸ್ಐ ಕೆ ವಾಲಿಕಾರ ತಿಳಿಸಿದ್ದಾರೆ.
ಕೊರೋನಾ ಸೋಂಕು ಹರಡದಂತೆ ಬೆಳಗಾವಿ ಜಿಲ್ಲಾ ಪೋಲಿಸ್ ಇಲಾಖೆಯಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಕೊರೋನಾ ನಿಯಂತ್ರಿಸಲು ಪೊಲೀಸರು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ, ಅವರಿಗೂ ಕುಟುಂಬ ಮಕ್ಕಳು, ಹಿರಿಯ ತಂದೆ ತಾಯಿಗಳು ಇರುತ್ತಾರೆ ಆದಕಾರಣ ಜನತೆ ಕೂಡ ತಮ್ಮ ಹಾಗೂ ಸಮಾಜದ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಮನೆಯಲ್ಲಿಯೇ ಉಳಿದು ಸಹಕಾರ ನೀಡದರೆ ಈ ಕೊರೋನಾ ಕಟ್ಟಿ ಹಾಕಬಹುದು.
ದಿ.4/06/2021 ಶುಕ್ರವಾರದಿಂದ 07/06/2021 ಸೋಮವಾರ ಬೆಳಗ್ಗೆ 6 ಗಂಟೆಯ ಗೋಕಾಕ ನಗರ ಸಂಪೂರ್ಣ ಲಾಕ್ ಡೌನ್ ಇರುವದರಿಂದ ಸಾರ್ವಜನಿಕರು ಅನಗತ್ಯ ಹೊರಗಡೆ ಬಂದರೆ ಅಂತವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.