ಗೋಕಾಕ: ಕೊರೋನಾ ನಿಯಂತ್ರಣಕ್ಕೆ ಮಾಡಲು ಜಿಲ್ಲಾಡಳಿತ ವಾರದ ಕೊನೆಯ ಮೂರು ದಿನ ಶುಕ್ರವಾರದಿಂದ ಸೋಮವಾರ ಮುಂಜಾನೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದು, ಇಂತಹ ಸಂದರ್ಭದಲ್ಲಿ ಯಾರು ಕೂಡಾ ಮನೆಯಿಂದ ಹೊರಗಡೆ ಬಾರದೆ ಇಲಾಖೆಯೊಂದಿಗೆ ಸಹಕರಿಸುವಂತೆ ಗೋಕಾಕ ಗ್ರಾಮಾಂತರ ಪೋಲಿಸ್ ಠಾಣೆಯ ಪಿಎಸ್ಐ ನಾಗರಾಜ್ ಖಿಲಾರೆ ಅವರು ತಿಳಿಸಿದ್ದಾರೆ.
ಕೊರೋನಾ ಸೋಂಕು ಹರಡದಂತೆ ಬೆಳಗಾವಿ ಜಿಲ್ಲಾ ಪೋಲಿಸ್ ಇಲಾಖೆಯಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಕೊರೋನಾ ನಿಯಂತ್ರಿಸಲು ಪೊಲೀಸರು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ, ಗ್ರಾಮೀಣ ಭಾಗದಲ್ಲಿ ಕೋವಿಡ ಹೆಚ್ಚಾಗುತ್ತಿದ್ದು ಅದಕ್ಕೆ ಕಡಿಯಾಣ ಹಾಕಲು ಎಲ್ಲರೂ ಜಿಲ್ಲಾಡಳಿತದ ನಿಯಮಗಳನ್ನ ಕಟ್ಟು ನಿಟ್ಟಾಗಿ ಪಾಲಿಸಬೇಕು, ನಿಮ್ಮ ಕುಟುಂಬ, ಮಕ್ಕಳು, ಹಿರಿಯ ತಂದೆ ತಾಯಿಗಳ ಹಾಗೂ ಸಮಾಜದ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಮನೆಯಲ್ಲಿಯೇ ಉಳಿದು ಸಹಕಾರ ನೀಡದರೆ ಈ ಕೊರೋನಾ ಕಟ್ಟಿ ಹಾಕಬಹುದು.
ದಿ.4/06/2021 ಶುಕ್ರವಾರದಿಂದ 07/06/2021 ಸೋಮವಾರ ಬೆಳಗ್ಗೆ 6 ಗಂಟೆಯ ಗೋಕಾಕ ನಗರ ಸಂಪೂರ್ಣ ಲಾಕ್ ಡೌನ್ ಇರುವದರಿಂದ ಸಾರ್ವಜನಿಕರು ಅನಗತ್ಯ ಹೊರಗಡೆ ಬಂದರೆ ಅಂತವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.