ಬೆಂಗಳೂರು, ಅಕ್ಟೋಬರ್ 09: ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಶುಕ್ರವಾರ ಪ್ರಕಟಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 2020ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು www.karresults.nic.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಪೂರಕ ಪರೀಕ್ಷೆಯಲ್ಲಿ ಒಟ್ಟು 2,12,678 ವಿದ್ಯಾರ್ಥಿಗಳು ಹಾಜರಾಗಿದ್ದರು.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ 87,784 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.