Breaking News

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ!


ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಪ್ರಕಟಿಸಿದ್ದಾರೆ. 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಮಲ್ಲೇಶ್ವರಂನ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಫಲಿತಾಂಶ ಪ್ರಕಟ ಮಾಡಲಾಗಿದೆ. ಪಿಯುಸಿ ಹಾಗೂ ಎಸ್‌ಎಸ್‌ಎಲ್​ಸಿ ಪರೀಕ್ಷೆ ಫಲಿತಾಂಶ ಆಧಾರದ ಮೇಲೆ ಪಿಯುಸಿ ಫಲಿತಾಂಶ ನೀಡಿದ್ದೇವೆ. ಅನೇಕ ವಿದ್ಯಾರ್ಥಿಗಳು ಎಕ್ಸಾಂ ಮಾಡುವಂತೆ ಮನವಿ ಮಾಡಿದ್ರು. ಆದರೆ, ಫಲಿತಾಂಶಕ್ಕೆ ಮಾರ್ಗಸೂಚಿ ತಂತ್ರ ಅನುಸರಿಸಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸಚಿವ ಸುರೇಶ್​ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಯಾವೊಬ್ಬ ವಿದ್ಯಾರ್ಥಿಗೂ ಅನ್ಯಾಯವಾಗದಂತೆ ಫಲಿತಾಂಶ ನೀಡಲಾಗಿದೆ ಎಂದು ಹೇಳಿದ್ದಾರೆ.

SSLC+1st PUC+ ದ್ವಿತೀಯ ಪಿಯುಸಿ ಕೃಪಾಂಕ ಪರಿಗಣನೆ ಮಾಡಲಾಗಿದೆ. ಅದರಂತೆ,
6,66,497 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
3,35,138 ವಿದ್ಯಾರ್ಥಿಗಳು,
3,31,359 ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ.
1,95,650 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್​ನಲ್ಲಿ ತೇರ್ಗಡೆ

450706 ಮಂದಿ ವಿದ್ಯಾರ್ಥಿಗಳು ಈ ಬಾರಿ ಡಿಸ್ಟಿಂಕ್ಷನ್ ಮತ್ತು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
147055 ಮಂದಿ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
68729 ವಿದ್ಯಾರ್ಥಿಗಳು ಜಸ್ಟ್ ಪಾಸ್

ಆಗಿದ್ದಾರೆ ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಏಕಾಏಕಿ ವಾಹಣ ತಡೆಯುವಂತಿಲ್ಲ; ಪೋಲಿಸರಿಗೆ ಡಿಜಿಪಿ ಪ್ರವೀಣ್ ಸೂದ್ ಸೂಚನೆ!

ಬೆಂಗಳೂರು: ನಗರದ ವಾಹನ ಸವಾರರಿಗೆ ಗುಡ್ ನ್ಯೂಸ್ ಇಲ್ಲಿದೆ. ಅನಗತ್ಯ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ