ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಹಿನ್ನೆಲೆ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ.
ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವಂತ ಸಿಬಿಐ, ತನ್ನ ತನಿಖೆಯನ್ನು ಚುರುಕುಗೊಳಿಸಿದೆ. ಇಂದು ಬೆಳಿಗ್ಗೆಯಿಂದ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಶಂಕೆಯ ಹಿನ್ನಲೆಯಲ್ಲಿ ವಿಚಾರಣೆ ನಡೆಸುತ್ತಿದೆ. ಈ ಮೂಲಕ ರೋಷನ್ ಬೇಗ್ ಅವರನ್ನು ಸಿಬಿಐ ಡ್ರಿಲ್ ನಡೆಸುತ್ತಿದೆ. ಇದೀಗ ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಗೆ ರೋಷನ್ ಬೇಗ್ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ
ಐಎಂಎ ಕಂಪನಿ ಮತ್ತು ಮನ್ಸೂರ್ ಖಾನ್ನಿಂದ ರೋಷನ್ ಬೇಗ್ಗೆ ಹಣ ಪಾವತಿಯಾಗಿರುವ ಆರೋಪವಿದೆ.
ಐಎಂಎ ಹಗರಣದ ಕುರಿತು ಫೋರೆನ್ಸಿಕ್ ಆಡಿಟ್ ನಡೆಸಿದ ವೇಳೆ, ರೋಷನ್ ಬೇಗ್ ಅವರಿಗೆ ಹಣ ಪಾವತಿಯಾಗಿರುವುದು ಕಂಡು ಬಂದ ಹಿನ್ನೆಲೆಯಲ್ಲಿ, ಸಿಬಿಐ ಅಧಿಕಾರಿಗಳು ರೋಷನ್ ಬೇಗ್ ಅವರನ್ನು ವಿಚಾರಣೆಗೆ ಕರೆಸಿದ್ದರು.
ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಆರೋಪಿ ಮನ್ಸೂರ್ ಖಾನ್ನಿಂದ ಸುಮಾರು 200 ಕೋಟಿ ರೂ. ಗೂ ಹೆಚ್ಚು ಹಣವನ್ನು ರೋಷನ್ ಬೇಗ್ ಪಡೆದಿದ್ದಾರೆ ಎಂಬ ಆರೋಪವಿದೆ. ಜೊತೆಗೆ ಐಷಾರಾಮಿ ಕಾರುಗಳೂ ಸೇರಿದಂತೆ ಇನ್ನಿತರ ದುಬಾರಿ ಬೆಲೆಯ ಉಡುಗೊರೆಗಳನ್ನೂ ರೋಷನ್ ಬೇಗ್ ಪಡೆದಿದ್ದಾರೆ ಎಂಬ ಆರೋಪವಿದೆ.