ಬೆಂಗಳೂರು: ವಿಧಾನಪರಿಷತ್ ಚುನಾವಣೆ ಘೋಷಣೆ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಗಳ ಲಾಬಿ ಜೋರಾಗಿದ್ದು, ಸಹೋದರನಿಗೆ ಪರಿಷತ್ ಟಿಕೆಟ್ ಕೊಡಿಸಲು ಶಾಸಕ ರಮೇಶ್ ಜಾರಕಿಹೊಳಿ ಕಸರತ್ತು ನಡೆಸಿದ್ದಾರೆ.
ಇಂದು ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದ ರಮೇಶ್ ಜಾರಕಿಹೊಳಿ ಅರ್ಧಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.
ಈ ವೇಳೆ ಲಖನ್ ಜಾರಕಿಹೊಳಿಗೆ ಪರಿಷತ್ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಲಖನ್ ಗೆ ಪರಿಷತ್ ಟಿಕೆಟ್ ಕೊಡಿಸುವ ನಿಟ್ಟಿನಲ್ಲಿ ರಮೇಶ್ ಜಾರಕಿಹೊಳಿ ಭಾರಿ ಲಾಬಿ ನಡೆಸಿದ್ದು, ಮೊನ್ನೆ ದೆಹಲಿಗೆ ಸಿಎಂ ತೆರಳಿದ್ದ ವೇಳೆ ಕೂಡ ಕರ್ನಾಟಕ ಭವನದಲ್ಲಿಯೂ ಸಿಎಂ ಭೇಟಿಯಾಗಿ ಚರ್ಚಿಸಿದ್ದರು.