ಬೆಳಗಾವಿ: ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳಿಗೆ ನಾಳೆಯಿಂದ ನಡೆಯಬೇಕಿದ್ದ ಪದವಿ, ಸ್ನಾತಕ, ಸ್ನಾತಕೋತ್ತರ ಹಾಗೂ ಎಂಬಿಎ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಏ.27ರಿಂದ ಪರೀಕ್ಷೆಗಳು ನಿಗದಿಯಾಗಿದ್ದವು. ಆದರೆ ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಅಲ್ಲದೇ ಮತ್ತೆ ನಾಳೆಯಿಂದ 14 ದಿನ ಲಾಕ್‍ಡೌನ್ ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದರಿಂದ ಸರ್ಕಾರದ ಆದೇಶದ ಮೇರೆಗೆ ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಅಧಿಕೃತವಾಗಿ ಪ್ರಕಟಣೆ ಹೊರಡಿಸಲಾಗಿದೆ.
CKNEWSKANNADA / BRASTACHARDARSHAN CK NEWS KANNADA