ಘಟಪ್ರಭಾ: ಗೋಕಾಕ ಮತಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ರಮೇಶ ಜಾರಕಿಹೊಳಿ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಇನ್ನೂ ಎರಡು ದಿನಗಳಲ್ಲಿ ಗೋಕಾಕ ದಲ್ಲಿ 40 ಮತ್ತು ಕೊಣ್ಣೂರ ದಲ್ಲಿ 10 ಮತ್ತು ತಾಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಲಾ ಐದು ಆಕ್ಷೀಜನ್ ಬೇಡ್ ಗಳನ್ನು ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ ಎಂದು ಶಾಸಕರ ಆಪ್ತ ಸಹಾಯಕ ರಾದ ಸುರೇಶ ಸನದಿ ಹೇಳಿದರು.
ಅವರು ಸೋಮವಾರ ದಂದು ಸಮೀಪದ ಶಿಂದಿಕುರಬೇಟ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಜರುಗಿದ ರಾಫೀಡ್ ಚಿಕಿತ್ಸೆ ಕಾರ್ಯಕ್ರಮವನ್ನು ಸಸಿಗೆ ನೀರು ಉಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಕೋರೋಣ ಎರಡನೇ ಅಲೆ ಗ್ರಾಮೀಣ ಭಾಗದಲ್ಲಿ ಹೆಚ್ಚು ಹರಡುತ್ತಿದ್ದು ಅದಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ಮತ್ತು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಗ್ರಾಮ ದ ಮುಖಂಡರು ಕೋರೋಣ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು. ಗೋಕಾಕ ತಹಶೀಲ್ದಾರ್ ಪ್ರಕಾಶ್ ಹೋಳೆಪ್ಪಗೋಳ ಅವರು ಮಾತನಾಡಿ ಈಗಾಗಲೇ ಗ್ರಾಮದಲ್ಲಿ ಸಭೆ ನಡೆಸಿ ಕೋರೋಣ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕೋರೋಣ ಪ್ರಕರಣ ಗಳು ಹೆಚ್ಚು ಹರಡುತ್ತಿದ್ದು ಅದಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರು ಮನೆ ಗಳಿಗೆ ಹೋಗಿ ಅನಾರೋಗ್ಯದಿಂದ ಬಳಲುತ್ತಿದ್ದ ಜನರಿಗೆ ರಾಫೀಡ್ ಚಿಕಿತ್ಸೆ ಮಾಡಬೇಕು. ಅವರಿಗೆ ಔಷಧಿ ಗಳನ್ನು ನೀಡಬೇಕು. ಬಡಕುಟುಂಬ ದ ಜನರಿಗೆ ಕೋವಿಡ್ ತಪಾಸಣೆ ವೇಳೆಯಲ್ಲಿ ಸೋಂಕು ಕಾಣಿಸಿಕೊಂಡ ರೆ ಅವರನ್ನು ಕೋವಿಡ್ ಕೇಂದ್ರ ದಲ್ಲಿ ಉಪಚಾರ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಅಂಟಿನ , ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಪ್ರವೀಣ ಕರಗಾಂವಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ರೇಣುಕಾ ಈರಪ್ಪ ಪಾಟೀಲ, ಉಪಾಧ್ಯಕ್ಷ ಭೀಮಪ್ಪ ಯಲ್ಲಪ್ಪ ಬಿರನಾಳಿ, ತಾ.ಪಂ ಸದಸ್ಯ ನಿಂಗಪ್ಪ ಬಂಬಲಾಡಿ, ಪಿಡಿಒ ಸಾಯೀಶ್ವರಿ ಮೆಣಸಿನಕಾಯಿ ಮತ್ತು ಕಂದಾಯ ನಿರೀಕ್ಷಕ ಎಸ್ ಎಸ್. ಎನ್. ಹಿರೇಮಠ, ಗ್ರಾಮ ಲೆಕ್ಕಾಧಿಕಾರಿ ಬಿ.ಕೆ.ಕೆಂಚರಡ್ಡಿ, ಪೋಲಿಸ್ ಇಲಾಖೆಯ ಹವಾಲ್ದಾರ ಮಲ್ಲಿಕಾರ್ಜುನ ಚನ್ನಬಸನವರ,ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಮತ್ತು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಸೇರಿದಂತೆ ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕ ಚಿದಾನಂದ ಡೂಗನವರ ಸ್ವಾಗತಿಸಿ, ವಂದಿಸಿದರು.