Breaking News

ಕೊರೋನಾ ಬಗ್ಗೆ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು ಅಧಿಕಾರಿಗಳಿಗೆ ರಮೇಶ ಜಾರಕಿಹೊಳಿ ಖಡಕ್ ಸೂಚನೆ


ಗೋಕಾಕ: ಕಳೆದ ಬಾರಿಗಿಂತ ಕೊರೋನಾ ಎರಡನೇ ಅಲೆ ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಗ್ರಾಮಗಳಲ್ಲಿ ಸೋಂಕಿತರನ್ನು ಹೋಂ ಕ್ವಾರಂಟೈನ್ ಮಾಡಲು ಸೂಕ್ತ ಕ್ರಮಕೈಗೊಂಡು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಸೂಚನೆ ನೀಡಿದರು.
ಅವರು, ಬುಧವಾರದಂದು ನಗರದ ತಾಪಂ ಸಭಾ ಭವನದಲ್ಲಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ಗ್ರಾಮ ಪಂಚಾಯತ ಅಧ್ಯಕ್ಷರು ಹಾಗೂ ಸದಸ್ಯರನ್ನು ಒಳಗೊಂಡAತೆ ಎಲ್ಲರೂ ಕೊರೋನಾ ಚೈನ್ ಬ್ರೇಕ್ ಮಾಡಲು ಇಂದಿನಿAದಲೇ ಕಾರ್ಯಪ್ರವೃತ್ತರಾಗುವಂತೆ ತಿಳಿಸಿದರು.

ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಕೊರೋನಾ ಟೇಸ್ಟ್ ಮಾಡಲಾಗುತ್ತಿದೆ. ಸೋಂಕಿತರ ಚಿಕಿತ್ಸೆಗಾಗಿ ಇನ್ನೂ ಹೆಚ್ಚಿನ ಶಾಲೆ ಹಾಗೂ ವಸತಿ ನಿಲಯಗಳನ್ನು ಬಳಿಸಿಕೊಂಡು ಕೋವಿಡ್ ಕೇರ್ ಸೆಂಟರಗಳನ್ನು ಪ್ರಾರಂಭಿಸಲಾಗುವದು. ಕೊರೋನಾ ಮಹಾಮಾರಿಯನ್ನು ತಡೆಯಲು ಅಧಿಕಾರಿಗಳು ನನ್ನಿಂದ ತಮಗೆ ಬೇಕಾಗುವ ಸಹಾಯ ಪಡೆಯಬಹುದು. ಪಿಡಿಓಗಳು ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬರುವವರನ್ನು ಹೊಂ ಐಸ್ಯೂಲೇಶನ್ ಮಾಡಲು ಸೂಕ್ತಕ್ರಮಕೈಗೊಳ್ಳಬೇಕೆಂದು ಹೇಳಿದರು.
ಗ್ರಾಮೀಣ ಭಾಗಗಳಲ್ಲಿ ಮದುವೆ ಕಾರ್ಯಕ್ರಮಗಳಲ್ಲಿ ಹಾಗೂ ಅಂತ್ಯಕ್ರೀಯೆಯಲ್ಲಿ ಜನರು ಸರಕಾರದ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ಭಾಗವಹಿಸುತ್ತಿದ್ದಾರೆ. ಅಧಿಕಾರಿಗಳು ಅಂತಹ ಸ್ಥಳಕ್ಕೆ ತೆರಳಿ ಕೊರೋನಾ ಬಗ್ಗೆ ತಿಳಿಹೇಳಿ, ಸಾಮಾಜಿಕ ಅಂತರ, ಮಾಸ್ಕ ಹಾಗೂ ಸ್ಯಾನಿಟೈಸರ್ ಬಳಸಲು ತಿಳಿಹೇಳಬೇಕು. ನಿಯಮ ಉಲ್ಲಂಘಿಸುವವರ ಮೇಲೆ ಕಾನೂನು ಕ್ರಮಕೈಗೊಳ್ಳಿ. ಪಟ್ಟಣಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದು, ಗ್ರಾಮೀಣ ಭಾಗದಲ್ಲೂ ಕಠೀಣ ಕ್ರಮಕೈಗೊಂಡು ಜೂನ್೭ರ ವರೆಗೆ ಜನರು ಮನೆಯಿಂದ ಹೊರಬರದಂತೆ ತಡೆದರೆ ಕೊರೋನಾ ಚೈನ್ ಬ್ರೇಕ್ ಮಾಡಲು ಸಾಧ್ಯ ಹೀಗಾಗಿ ಪೋಲಿಸ್ ಇಲಾಖೆಯ ಅಧಿಕಾರಿಗಳು ಕಠೀಣ ಕ್ರಮಕೈಗೊಳ್ಳಬೇಕೆಂದು ತಿಳಿಸಿದರು.
ಪಿಡಿಓಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಸಚಿವ: ಕಳೆದ ಬಾರಿ ಕಾರ್ಯನಿರ್ವಹಿಸಿದಂತೆ ಗ್ರಾಮೀಣ ಭಾಗದಲ್ಲಿ ಪಿಡಿಓಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಎಂಬ ದೂರುಗಳು ಬರುತ್ತಿವೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಪಿಡಿಓಗಳನ್ನು ತರಾಟೆಗೆ ತೆಗೆದುಕೊಂಡರು.
ಗ್ರಾಮಗಳಲ್ಲಿರಬೇಕಾದ ಅಧಿಕಾರಿಗಳು ಬೇರೆ ಎಲ್ಲೊ ಕುಳಿತು ಕಾರ್ಯನಿರ್ವಹಿಸುತ್ತಿದ್ದಾರೆ. ಕೂಡಲೇ ಆಯಾ ಗ್ರಾಮ ಪಂಚಾಯತ ಪಿಡಿಓಗಳು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರ ಜೊತೆ ಸೇರಿ ಕೊರೋನಾ ತಡೆಯಲು ಮುಂದಾಗಬೇಕು. ಏನಾದರೂ ಸಮಸ್ಯೆಯಾದಲ್ಲಿ ತಾಲೂಕ ಟಾಸ್ಕಪೋರ್ಸ ಅಧಿಕಾರಿಗಳ ಹಾಗೂ ನನ್ನ ಗಮನಕ್ಕೆ ತರಬೇಕು ಎಂದು ತರಾಟೆಗೆ ತೆಗೆದುಕೊಂಡರು.
ಸ್ವಚ್ಛತೆಗೆ ಆದ್ಯತೆ ನೀಡಿ: ಕೊರೋನಾ ಸಾಂಕ್ರಾಮಿಕ ರೋಗ ಹೀಗಾಗಿ ಗೋಕಾಕ ನಗರಸಭೆ, ಕೊಣ್ಣೂರು ಪುರಸಭೆ ಹಾಗೂ ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತ ಭಾಗದಲ್ಲಿ ಅಧಿಕಾರಿಗಳು ಕೊರೋನಾ ಸಂದರ್ಭದಲ್ಲಿ ನಗರ ಪಟ್ಟಣಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಸೂಚಿಸಿದರು. ಕಳೆದ ಕೆಲವು ದಿನಗಳಿಂದ ಸ್ವಚ್ಛತೆಯನ್ನು ಮರೆತು ಅಧಿಕಾರಿಗಳು ಕೊರೋನಾ ಲಾಕ್ ಡೌನ್ ಕಾರ್ಯದಲ್ಲಿ ತೋಡಗಿರುವದಾಗಿ ಕುಂಟುನೆಪ ಹೇಳುವದನ್ನು ಬಿಟ್ಟು ಸ್ವಚ್ಛತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ, ಡಿವೈಎಸ್‌ಪಿ ಮನೋಜಕುಮಾರ ನಾಯಕ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಿ ಕೆ ಲಾಳಿ, ಪ್ರೊಬೆಷನರಿ ಎಸಿ ಅಭಿಷೇಕ ವ್ಹಿ, ಸಿಪಿಐ ಗೋಪಾಲ ರಾಠೋಡ ಇದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ