ಬೆಳಗಾವಿ ಜಿಲ್ಲೆಗೆ *11 ಹೊಸ ಏತ ನೀರಾವರಿ ಯೋಜನೆ* ಗಳನ್ನು ಜಾರಿಗೊಳಿಸುವ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ* ಅವರ ಪ್ರಸ್ತಾಪಗಳಿಗೆ ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮ ನಿಯಮಿತವು ಅನುಮತಿ ನೀಡಿದೆ.
ನಿನ್ನೆ ನಡೆದ ನಿಗಮದ ಅಂದಾಜು ಪರಿಶೀಲನಾ ಸಭೆಯಲ್ಲಿ ಈ *11 ಏತ ನೀರಾವರಿ ಯೋಜನೆ* ಗಳ ಅನುಷ್ಠಾನಕ್ಕೆ ಸಂಬಂಧಿಸಿ ಚರ್ಚೆ ನಡೆಸಿ, ಈ ಯೋಜನೆಗಳಿಗೆ ಅವಶ್ಯವಿರುವ *9.91 ಟಿಎಂಸಿ ನೀರನ್ನು ಹಂಚಿಕೆ ಮಾಡಲು* ಸಹಾ ಅನುಮೋದನೆ ನೀಡಲಾಗಿದೆ.
ಹಾಗೆಯೇ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲ್ಲೂಕುಗಳಲ್ಲಿ ಅನುಷ್ಠಾನಕ್ಕೆ ತರಲಾಗುವ ವಿವಿಧ *ಏಳು ನೀರಾವರಿ ಯೋಜನೆ* ಗಳಿಗೂ ಸಹಾ ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮದ ಅಂದಾಜು ಪರಿಶೀಲನಾ ಸಭೆ ಅನುಮತಿ ನೀಡಿದೆ.