ಗೋಕಾಕ: ಹಿಂದುಳಿದ ಉಪ್ಪಾರ ಸಮಾಜ ನಡೆಸುತ್ತಿರುವ ಪ್ರತಿಭಟನೆಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಶಾಸಕ ರಮೇಶ ಜಾರಕಿಹೊಳಿ ಉಪ್ಪಾರ ಸಮಾಜದ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಗುರುವಾರದಂದು ಸಂಜೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಉಪ್ಪಾರ ಸಮಾಜದ ಹೋರಾಟ ಇಂದು ನಿನ್ನೆಯದಲ್ಲ ಕಳೆದ ಐದು ದಶಕಗಳಿಂದ ಅವರು ತಮ್ಮ ಹಕ್ಕನ್ನು ಪಡೆಯಲು ಹೋರಾಟ ನಡೆಸುತ್ತ ಬಂದಿದ್ದು ಉಪ್ಪಾರ ಸಮಾಜವನ್ನು ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಹೇಳಿದ್ದಾರೆ.
ಉಪ್ಪಾರ ಸಮಾಜವನ್ನು ಪರಿಶಿಷ್ಠ ಜಾತಿ/ಪರಿಶಿಷ್ಠ ಪಂಗಡಕ್ಕೆ ಸೇರಿಸುವಂತೆ ಅನೇಕ ಆಯೋಗಗಳು ವರದಿಯನ್ನು ನೀಡಿವೆ. ೫೪ಲಕ್ಷ ಜನ ಸಂಖ್ಯೆ ಹೊಂದಿರುವ ಉಪ್ಪಾರ ಸಮಾಜ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಬಹಳ ಹಿಂದುಳಿದ ಸಮಾಜ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ಉಪ್ಪಾರ ಸಮಾಜಕ್ಕೆ ಮೀಸಲಾತಿ ನೀಡುವಂತೆ ನಾನು ಸಹ ಒತ್ತಾಯ ಮಾಡುತ್ತೆನೆ ಎಂದು ತಿಳಿಸಿದ್ದಾರೆ.
CKNEWSKANNADA / BRASTACHARDARSHAN CK NEWS KANNADA