ಹುಬ್ಬಳ್ಳಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.
ಹುಟ್ಟುಹಬ್ಬದ ನೆಪದಲ್ಲಿ ಭಾನುವಾರ ರಾತ್ರಿ ಕೇಂದ್ರ ಸಚಿವರನ್ನು ಭೇಟಿಯಾಗಿದ್ದಾರೆ.
ಪ್ರಹ್ಲಾದ್ ಜೋಶಿ ಮತ್ತು ಜಗದೀಶ್ ಶೆಟ್ಟರ್ ಭೇಟಿಯಾದ ರಮೇಶ್ ಜಾರಕಿಹೊಳಿ
ಭಾನುವಾರ ರಾತ್ರಿ ಜೋಶಿ ನಿವಾಸಕ್ಕೆ ಆಗಮಿಸಿದ ಜಾರಕಿಹೊಳಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಹಲವರ ಜೊತೆ ಕೆಲಹೊತ್ತು ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮೇಲ್ನೋಟಕ್ಕೆ ಕೇಂದ್ರ ಸಚಿವರ ಹುಟ್ಟುಹಬ್ಬಕ್ಕೆ ಶುಭ ಕೋರಲು ಬಂದರೂ ಸಚಿವ ಸಂಪುಟ ವಿಸ್ತರಣೆ ಆಗುತ್ತಿದ್ದು ಉಭಯ ನಾಯಕರ ಭೇಟಿ ಚರ್ಚೆ ಹುಟ್ಟು ಹಾಕಿದ್ದು, ಸಾಹುಕಾರ ನಡೆ ಕುತೂಹಲ ಮೂಡಿಸಿದೆ.