ಗೋಕಾಕ ಡಿ 3 : ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ವಂದಿಸಿ ಸರಕಾರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಶಾಸಕ ರಮೇಶ ಜಾರಕಿಹೊಳಿ ಅವರು ಹೇಳಿದರು
ಶನಿವಾರದಂದು ನಗರದ ಶಾಸಕರ ಕಛೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸರಕಾರ ಜನರ ಹಿತಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಅವುಗಳನ್ನು ಗುಣಮಟ್ಟದೊಂದಿಗೆ ತ್ವರಿತಗತಿಯಲ್ಲಿ ಅಧಿಕಾರಗಳು ಅನುಷ್ಠಾನಗೊಳಿಸಬೇಕು ಎಂದ ಅವರು ನಗರದಲ್ಲಿ ಹೆಚ್ಚುತ್ತಿರುವ ಬಿಡಾಡಿ ದನಗಳ ಮತ್ತು ಬೀದಿ ನಾಯಿಗಳ ಹಾವಳಿಯನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು.ಜನರು ಬಿಡಾಡಿ ದನಗಳ ಬಗ್ಗೆ ಮತ್ತು ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿರುವ ಕುರಿತು ದೂರುಗಳನ್ನು ನೀಡುತ್ತಿದ್ದಾರೆ. ಹಾಗಾಗಿ ನಗರಸಭೆ ಅಧಿಕಾರಿಗಳು ಇವುಗಳ ಹಾವಳಿಯನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಂಡು ಅವುಗಳನ್ನು ಸ್ಥಳಾಂತರಿಸಲು ಕ್ರಮ ವಹಿಸಬೇಕು ಎಂದರು.
ಸಭೆಯಲ್ಲಿ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ, ಡಿವಾಯ್ಎಸ್ಪಿ ಮನೋಜಕುಮಾರ ನಾಯಕ, ಸಿಪಿಐಗಳಾದ ಗೋಪಾಲ ರಾಠೋಡ, ಶ್ರೀಶೈಲ ಬ್ಯಾಕೂಡ, ಪೌರಾಯುಕ್ತ ಶಿವಾನಂದ ಹಿರೇಮಠ, ಪರಿಸರ ಅಭಿಯಂತರ ಎಂ.ಎಚ್.ಗಜಾಕೋಶ, ಡಾ.ಮೋಹನ ಕಮತ, ನಗರಸಭೆ ಅಧ್ಯಕ್ಷ ಜಯಾನಂದ ಹುಣ್ಚಚ್ಯಾಳಿ ಉಪಸ್ಥಿತರಿದ್ದರು