ಗೋಕಾಕ: ಕಾರ್ಮಿಕರ ಹಿತ ಕಾಯುವ ಉದ್ದೇಶದಿಂದ ಸರಕಾರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ರವಿವಾರದಂದು ನಗರದ ಶಾಸಕರ ಕಛೇರಿಯಲ್ಲಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅಸಂಘಟಿತ ಕಾರ್ಮಿಕರ ಮಕ್ಕಳಿಗೆ ಕಾರ್ಮಿಕ ಇಲಾಖೆಯಿಂದ ನೀಡಲಾಗುವ ಎಲೆಕ್ಟ್ರಿಕಲ್ ಕಿಟ್’ ಗಳನ್ನು ವಿತರಿಸಿ ಅವರು ಮಾತನಾಡಿದರು.
ಕಾರ್ಮಿಕರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಮಿಕರಿಗೆ ಪಿಂಚಣಿ, ವಸತಿ ಸಹಿತ ತರಬೇತಿ, ಹೆರಿಗೆ ಸೌಲಭ್ಯ, ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ಸಹಾಯ ಧನ ಸೇರಿದಂತೆ ಹಲವು ಸವಲತ್ತುಗಳನ್ನು ಸರಕಾರದ ವತಿಯಿಂದ ನೀಡಲಾಗುತ್ತಿದೆ. ಅಸಂಘಟಿತ ಕಾರ್ಮಿಕರು ತಮ್ಮ ಹೆಸರನ್ನು ಇಲಾಖೆಯಲ್ಲಿ ನೊಂದಾಯಿಸುವ ಮೂಲಕ ಸರಕಾರದ ಸೌಲಭ್ಯಗಳ ಸದುಪಯೋಗಪಡಿಸಿಕೊಳ್ಳಬೇಕು ಎಂದ ಅವರು ಕಾರ್ಮಿಕರಿಗೆ ಸಿಗುವ ಸರ್ಕಾರದ ಎಲ್ಲಾ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಉದ್ದೇಶ ಸರಕಾರ ಹೊಂದಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣ್ಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೇನ್ನವರ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಕಾಂತು ಎತ್ತಿನಮನಿ, ಕಾರ್ಮಿಕ ನಿರೀಕ್ಷಕ ಪಾಂಡುರಂಗ ಮಾವರಕರ, ಕಾರ್ಮಿಕ ಇಲಾಖೆಯ ಸಿಬ್ಬಂದಿ ರುದ್ರಮನಿ ಹಿರೇಮಠ, ಈರಪ್ಪ ಮಾಲೋಜಿ, ಅಲ್ತಾಫ ಜಕಾತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.