ಗೋಕಾಕ: ಪ್ರಧಾನಿ ನರೇಂದ್ರ ಮೋದಿಜಿ ಅವರ ತಾಯಿಯವರಾದ ಹೀರಾ ಬೇನ್ ಮೋದಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಭೆ ನಗರದ ಶಾಸಕರ ಗೃಹ ಕಚೇರಿಯಲ್ಲಿ ಜರುಗಿತು.
ಶಾಸಕ ರಮೇಶ ಜಾರಕಿಹೊಳಿ ಅವರು ಶ್ರೀಮತಿ ಹೀರಾ ಬೇನ್ ಮೋದಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖೇನ ಗೌರವ ನಮನ ಸಲ್ಲಿಸಿದರು.
ಭಾರತಾಂಬೆಯ ಹೆವ್ಮ್ಮೆಯ ಪುತ್ರ ನರೇಂದ್ರ ಮೋದಿಯವರ ತಾಯಿ ಶುಕ್ರವಾರದಂದು ತಡರಾತ್ರಿ ನಿಧನರಾಗಿರುವ ಸುದ್ದಿ ತಿಳಿದು ಮನಸ್ಸಿಗೆ ತುಂಬಾ ನೋವಾಗಿದೆ. ತಾಯಿ ಹೀರಾ ಬೇನ್ ಮೋದಿಯವರು ಸರಳತೆಗೆ ಸಾಕ್ಷಿಯಾಗಿದ್ದರು. ಪ್ರಧಾನಿ ಮೋದಿಯವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ನೀಡಲಿ. ಮೃತರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಶಾಸಕ ರಮೇಶ ಜಾರಕಿಹೊಳಿ ಪ್ರಾರ್ಥಿಸಿದರು.
ಈ ಸಂಧರ್ಭದಲ್ಲಿ ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಲಕ್ಷö್ಮಣ ತಪಶಿ, ಎಸ್ ವಿ ದೇಮಶೆಟ್ಟಿ, ಬಸವರಾಜ ಹಿರೇಮಠ, ಜೋಶಿ, ಜ್ಯೋತಿ ಕೋಲಾರ ಸೇರಿದಂತೆ ನಗರ ಹಾಗೂ ಗ್ರಾಮೀಣ ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾ ಪದಾಧಿಕಾರಿಗಳು, ನಗರಸಭೆ ಸದಸ್ಯರು, ಮುಖಂಡರು ಉಪಸ್ಥಿತರಿದ್ದರು.